ಹೊಸದಿಗಂತ ಡಿಜಿಟಲ್ ಡೆಸ್ಕ್:
ನಂದಿನಿ ಹಾಲಿನ ದರ ಹೆಚ್ಚಳವಾಗಿದ್ದು, ಹೊಟೇಲ್‌ಗಳಲ್ಲಿ ಟೀ ಕಾಫಿ ದರ ಹೆಚ್ಚಾಗಲಿದ್ಯಾ ಎನ್ನುವ ಪ್ರಶ್ನೆಗೆ ಕಡೆಗೂ ಉತ್ತರ ಸಿಕ್ಕಿದೆ.
ಕಾಫಿ-ಟೀ ಬೆಲೆ ಏರಿಕೆ ಮಾಡುವುದಿಲ್ಲ. ಹಾಲನ್ನೇ ಕಡಿಮೆ ಖರೀದಿ ಮಾಡುತ್ತೇವೆಂದು ಬೆಂಗಳೂರು ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳ ಸಂಘದ ಸದಸ್ಯರು ಹೇಳಿದ್ದಾರೆ.
ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳ ಸಂಘದ ಅಧ್ಯಕ್ಷ ಪಿಸಿ.ರಾವ್ ಅವರು ಮಾತನಾಡಿ, ಕೆಎಂಎಫ್ ಹಾಲಿನ ದರವನ್ನು ಹೆಚ್ಚಿಸಿಲ್ಲ ಎಂದು ಹೇಳಿದೆ. ಅರ್ಧ/ಒಂದು ಲೀಟರ್ ಪ್ಯಾಕೆಟ್‌ಗೆ 50ಎಂಎಲ್ ಹಾಲನ್ನು ಹೆಚ್ಚು ಸೇರಿಸಿದ್ದು, ಹೆಚ್ಚಿನ ಹಾಲು ಹಿನ್ನೆಲೆಯಲ್ಲಿ ಅದಕ್ಕೆ ಶುಲ್ಕ ವಿಧಿಸಿದೆ. ಇದರಿಂದ ಹೆಚ್ಚಿನ ವ್ಯತ್ಯಾಸವಾಗುವುದಿಲ್ಲ. ವಾಸ್ತವವಾಗಿ, ನಾವು ಕಡಿಮೆ ಹಾಲು ಖರೀದಿಸುತ್ತೇವೆ. ಉದಾಹರಣೆಗೆ, ಒಂದು ಹೋಟೆಲ್ 100 ಲೀಟರ್ ಖರೀದಿಸುತ್ತಿದ್ದ ಹೋಟೆಲ್ ಇದೀಗ ಕೇವಲ 95 ಲೀಟರ್ ಖರೀದಿಸಲಿದೆ. ಹೀಗಾಗಿ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಸದ್ಯ ಹೊಟೇಲ್‌ಗಳಲ್ಲಿ ಕಾಫಿ ಹಾಗೂ ಟೀ ಬೆಲೆ ಹತ್ತರಿಂದ ಹದಿನೈದು ರೂಪಾಯಿ ಇದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ.