October 12, 2026
Monday, October 12, 2026
spot_img

ಹೋಟೆಲ್‌ ಆಯ್ತು ಇನ್ನು PG, ಹಾಸ್ಟೆಲ್‌ಗಳ ಸರದಿ: ನಾಳೆಯಿಂದ ಅಧಿಕಾರಿಗಳಿಂದ ಭರ್ಜರಿ ತಪಾಸಣೆ ಶುರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಗರದ ಹೋಟೆಲ್‌ಗಳ ಅಡುಗೆಮನೆಗಳಲ್ಲಿ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಪತ್ತೆಯಾದ ಬೆನ್ನಲ್ಲೇ, ಇದೀಗ ಬೆಂಗಳೂರು ನಗರ ವ್ಯಾಪ್ತಿಯ ಪಿಜಿ, ಹಾಸ್ಟೆಲ್‌, ರೆಸ್ಟೋರೆಂಟ್‌, ಡಾಬಾ ಸೇರಿದಂತೆ ಆಹಾರ ತಯಾರಿಕಾ ಕೇಂದ್ರಗಳ ತಪಾಸಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ.

ಪಿಜಿ, ಹಾಸ್ಟೆಲ್‌ಗಳ ತಪಾಸಣೆಗೆ ಸೂಚನೆ

ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ತಪಾಸಣೆ ನಡೆಸುವಂತೆ ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಪಿಜಿ ಹಾಗೂ ಹಾಸ್ಟೆಲ್‌ಗಳ ಮೇಲೂ ವಿಶೇಷ ಗಮನ ಹರಿಸಲಾಗುತ್ತಿದೆ.

ಜಂಟಿ ತಂಡ ರಚನೆ

ಪಿಜಿಗಳ ಪರಿಶೀಲನೆಗಾಗಿ ಉಪ ನಿರ್ದೇಶಕರು, ಕಾರ್ಯಪಾಲಕ ಅಭಿಯಂತರರು, ಆರೋಗ್ಯ ವೈದ್ಯಾಧಿಕಾರಿ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ಒಳಗೊಂಡ ಜಂಟಿ ತಂಡ ರಚಿಸಲಾಗಿದೆ. ನಿಯಮ ಉಲ್ಲಂಘನೆ ಕಂಡುಬಂದರೆ ಕಾನೂನುಬದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಇದನ್ನೂ ಓದಿ:

ಏನೆಲ್ಲ ಪರಿಶೀಲನೆ?

ಆಹಾರ ತಯಾರಿಕಾ ಸ್ಥಳದ ಸ್ವಚ್ಛತೆ, ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ, ಕಟ್ಟಡ ಮತ್ತು ಅಗ್ನಿ ಸುರಕ್ಷತೆ, ವ್ಯಾಪಾರ ಪರವಾನಗಿ, ಘನತ್ಯಾಜ್ಯ ನಿರ್ವಹಣೆ, ಪಾರ್ಕಿಂಗ್ ಹಾಗೂ ಸಾರ್ವಜನಿಕ ಆಸ್ತಿ ಒತ್ತುವರಿ ಸೇರಿದಂತೆ ವಿವಿಧ ಅಂಶಗಳನ್ನು ಅಧಿಕಾರಿಗಳು ಪರಿಶೀಲಿಸಲಿದ್ದಾರೆ.

Must Read