ದೆಹಲಿಯಲ್ಲಿ ‘ಘರ್ ವಾಪಸಿ’: ಆಪ್‌ ಸೇರಿದ ಕೆಲವೇ ಗಂಟೆಗಳಲ್ಲಿ‌ ಕಾಂಗ್ರೆಸ್‌ಗೆ  ವಾಪಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದಿಲ್ಲಿಯಲ್ಲಿ ಒಂದೇ ದಿನದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳು ನಡೆದಿವೆ. ಆಮ್ ಆದ್ಮಿ ಪಕ್ಷಕ್ಕೆ ಸೇರಿದ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ನಾಯಕರು ವಾಪಸ್ ಬಂದು ತಮ್ಮದೇ ಪಕ್ಷ ಸೇರುವ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ‘ಘರ್ ವಾಪಸಿ’ ಯಶಸ್ವಿಯಾಗಿದೆ. ಇತ್ತೀಚೆಗೆ ನಡೆದ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದರೆ, ಬಿಜೆಪಿ ವಿರೋಧ ಪಕ್ಷವಾಗಿ ನಿಂತಿತ್ತು.

ಕಾಂಗ್ರೆಸ್ ಹೀನಾಯವಾಗಿ ಸೋತಿತ್ತು. 250 ಸ್ಥಾನಗಳ ಪೈಕಿ ಕಾಂಗ್ರೆಸ್ 9 ಸ್ಥಾನಗಳನ್ನು ಮಾತ್ರ ಗೆದ್ದಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಮೂವರು ಕಾಂಗ್ರೆಸ್ ನಾಯಕರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಇವರಲ್ಲಿ ಇಬ್ಬರು ಕೌನ್ಸಿಲರ್‌ಗಳು ಇತ್ತೀಚೆಗೆ ಕಾಂಗ್ರೆಸ್‌ನಿಂದ ದೆಹಲಿ ಪಾಲಿಕೆ ಚುನಾವಣೆಯಲ್ಲಿ ಗೆದ್ದಿದ್ದಾರೆ. ಸಬಿಲಾ ಬೇಗಂ ಮತ್ತು ನಾಜಿಯಾ ಖಾತೂನ್ ಕೌನ್ಸಿಲರ್‌ಗಳು ಮತ್ತು ದೆಹಲಿ ಕಾಂಗ್ರೆಸ್ ಉಪಾಧ್ಯಕ್ಷರು ಅಧ್ಯಕ್ಷ ಅಲಿ ಮೆಹದಿ ಕೂಡ ಆಮ್ ಆದ್ಮಿಗೆ ಸೇರ್ಪಡೆಯಾದರು. ಇವರೆಲ್ಲರೂ ಶುಕ್ರವಾರ ಮಧ್ಯಾಹ್ನ ಆಮ್ ಆದ್ಮಿಗೆ ಸೇರಿದ್ದಾರೆ. ಆದರೆ ಕೂಡಲೇ ಶನಿವಾರ ಬೆಳಗಿನ ಜಾವ ಎರಡು ಗಂಟೆಗೆ ಮತ್ತೆ ಕಾಂಗ್ರೆಸ್ ಪಕ್ಷ ಸೇರುತ್ತಿರುವುದಾಗಿ ಘೋಷಿಸಿದರು.

ಕಾಂಗ್ರೆಸ್ ರಾಜ್ಯಸಭಾ ಸಂಸದ ಇಮ್ರಾನ್ ಪ್ರತಾಪ್ ಗರ್ಹಿ ಅವರ ಸಮ್ಮುಖದಲ್ಲಿ ಅವರು ಮತ್ತೆ ಕಾಂಗ್ರೆಸ್ ಸೇರಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಪಕ್ಷ, ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿಯವರಲ್ಲಿ ಕ್ಷಮೆಯಾಚಿಸಿದರು. ರಾಹುಲ್ ಗಾಂಧಿಯವರ ಕಾರ್ಯಕರ್ತರಾಗಿಯೇ ಉಳಿಯುತ್ತೇವೆ ಎಂದು ಘೋಷಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!