ಹೊಸ ದಿಗಂತ ವರದಿ, ಮುಂಡಗೋಡ:
ತಾಲೂಕಿನ ಹುನಗುಂದ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಮನೆಯಲ್ಲಿದ್ದ ಒಡವೆ, ನಗದು, ಬಟ್ಟೆ, ಪಾತ್ರೆ ಸೇರಿದಂತೆ ಅನೇಕ ಸಾಮಾಗ್ರಿಗಳು ಸುಟ್ಟು ಸುಟ್ಟು ಹೋಗಿದ್ದು, ಇದೀಗ ಮನೆಗೆ ಶಾಸಕ ಶಿವರಾಮ ಹೆಬ್ಬಾರ್ ಅವರು ಮಂಗಳವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಜೈತುನಬಿ ಗಾಡಿವಾಲೆ ಎಂಬವರಿಗೆ ಸೇರಿದ ಮನೆಯು ಭಾನುವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿತ್ತು.
ಇಂದು ಶಾಸಕರು ಭೇಟಿ ನೀಡಿ ಹಾನಿಗೆ ಒಳಗಾದ ಕುಟುಂಬದವರಿಗೆ ಸಾಂತ್ವನ ಹೇಳಿ ಸರ್ಕಾರದಿಂದ ನೂತನ ಮನೆ ಮಂಜೂರಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಕೊಡಿಸಲಾಗುವುದಾಗಿ ಭರವಸೆ ನೀಡಿದರು.
ಮಾಜಿ ಶಾಸಕ ವಿ.ಎಸ್.ಪಾಟೀಲ,ಕೃಷ್ಣ ಹಿರಳ್ಳಿ ಎಚ್.ಎಂ.ನಾಯ್ಕ, ಹುನಗುಂದ ಪಂಚಾಯಿತಿ ಪಿಡಿಒ ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು.