ದೆಹಲಿಯ ಕರೋಲ್ ಬಾಗ್‌ನಲ್ಲಿ ಮನೆ ಕುಸಿತ: ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೇಂದ್ರ ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ಮನೆ ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಕನಿಷ್ಠ 12 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕರೋಲ್ ಬಾಗ್‌ನ ಪ್ರಶಾದ್ ನಗರದಲ್ಲಿ ಮನೆಯೊಂದು ಕುಸಿದಿರುವ ಬಗ್ಗೆ ಇಲಾಖೆಗೆ ಬೆಳಿಗ್ಗೆ 9.12 ಕ್ಕೆ ಕರೆ ಬಂದಿತು, ನಂತರ ಐದು ಅಗ್ನಿಶಾಮಕ ವಾಹನಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿದೆ.

ಮೂರು ಅಂತಸ್ತಿನ ಹಳೆಯ ಕಟ್ಟಡದ ಕೆಲವು ಭಾಗವು ಬೆಳಿಗ್ಗೆ ಕುಸಿದಿದೆ ಹಲವು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ, ನಂತರ ಅವರನ್ನು ರಕ್ಷಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ನಿರ್ದೇಶಕ ಅತುಲ್ ಗರ್ಗ್ ಹೇಳಿದ್ದಾರೆ.

ನಾವು ಇಲ್ಲಿಯವರೆಗೆ 12 ಜನರನ್ನು ರಕ್ಷಿಸಿದ್ದೇವೆ, ಇನ್ನೂ ಕೆಲವರು ಸಿಕ್ಕಿಬಿದ್ದಿರುವ ಸಾಧ್ಯತೆಯಿದೆ ಎಂದು ಡಿಸಿಪಿ ಹೇಳಿದರು, ಸ್ಥಳೀಯ ಪೊಲೀಸರು ಮತ್ತು ಇತರ ಏಜೆನ್ಸಿಗಳು ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ ಎಂ ಹರ್ಷವರ್ಧನ್ ತಿಳಿಸಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!