ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಳೆಯಿಂದ ಮನೆ ಗೋಡೆ ಕುಸಿದು ಮೂವರು ಮೃತಪಟ್ಟಿರುವ ಘಟನೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ.
ದುರಂತದಲ್ಲಿ ಚೆನ್ನಮ್ಮ (30), ಅಮೂಲ್ಯ (3), ಅನನ್ಯಾ (6) ಮೃತ ದುರ್ದೈವಿಗಳು. ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸವಣೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೃದ್ಧೆ ಯಲ್ಲಮ್ಮ, ಪುತ್ರ ಮುತ್ತು, ಸೊಸೆ ಸುನೀತಾ ಗಾಯಾಳುಗಳು. ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಭಾರಿ ಮಳೆಯಾಗುತ್ತಿದೆ. ಆರು ಜನರು ಮನೆಯಲ್ಲಿ ಒಂದೇ ಕಡೆ ಮಲಗಿದ್ದರು.
ಇಂದು ನಸುಕಿನ ಜಾವ ಸುಮಾರು 3.30ಕ್ಕೆ ಆರು ಜನರ ಮೇಲೆ ಗೋಡೆ ಬಿದ್ದಿದೆ. ಇದರಿಂದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ. ಹುಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.