ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದ್ಯುತ್ ಅವಘಡದಿಂದ ಮನೆಗೆ ಬೆಂಕಿ ತಗುಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.
ಇಂದು ಬೆಳಗ್ಗೆ ಕುಟುಂಬದವರು ಮಲಗಿದ್ದಾಗ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸಿ ಮೃತದೇಹವನ್ನು ಹೊರ ತೆಗೆದಿದ್ದಾರೆ.
ಮೃತರನ್ನು ಗುಲ್ಬಹರ್ (32) ಹಾಗೂ ಆಕೆಯ ಇಬ್ಬರು ಅಪ್ರಾಪ್ತ ಪುತ್ರರು ಎಂದು ಗುರುತಿಸಲಾಗಿದೆ. ಅದೇ ಮನೆಯಲ್ಲಿ ವಾಸಿಸುತ್ತಿದ್ದ ಸಂಬಂಧಿಕರ ಮಗ ಕೂಡ ಘಟನೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಹಿಳೆಯ ಪತಿ ಶಹನವಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.