ಜಮ್ಮು ಕಾಶ್ಮೀರದಲ್ಲಿ ಮನೆಗೆ ಬೆಂಕಿ: ಮಾಜಿ ಡಿಎಸ್‌ಪಿ ಸಹಿತ 6 ಮಂದಿ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಮನೆಗೆ ಬೆಂಕಿ ತಗುಲಿದ ಪರಿಣಾಮ ಮಾಜಿ ಡಿಎಸ್‌ಪಿ ಸೇರಿದಂತೆ ಒಟ್ಟು 6 ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಮೃತರನ್ನು ಡಿಎಸ್‌ಪಿ ಅವತಾರ್ ಕೃಷ್ಣ ರೈನಾ (81), ಮಗಳು ಬರ್ಖಾ ರೈನಾ (25), ಮಗ ತಕಾಶ್ (3), ಗಂಗಾ ಭಗತ್ (17), ಡ್ಯಾನಿಶ್ ಭಗತ್ (15) ಮತ್ತು ಅದ್ವಿಕ್ (6) ಎಂದು ಗುರುತಿಸಲಾಗಿದೆ.

ಬುಧವಾರ ನಸುಕಿನ ಜಾವ 2:30ರ ಸುಮಾರಿಗೆ ಘಟನೆ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮನೆಯೊಳಗೆ ದಟ್ಟ ಹೊಗೆ ಆವರಿಸಿದ ಪರಿಣಾಮ ಮಲಗಿದ್ದವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವೇಳೆ ಇಬ್ಬರು ಅಪ್ರಾಪ್ತರು ಸೇರಿದಂತೆ ಒಟ್ಟು ಆರು ಜನ ಸಾವನ್ನಪ್ಪಿದ್ದಾರೆ. ಸದ್ಯ 4 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಸುತ್ತಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!