ಗ್ಯಾಂಗ್‍ಸ್ಟರ್ ಅತೀಕ್ ಭೂಮಿಯಲ್ಲಿ ಬಡವರಿಗೆ ಮನೆ: ಶೀಘ್ರವೇ ಹಂಚಲಿದ್ದಾರೆ ಸಿಎಂ ಯೋಗಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉತ್ತರ ಪ್ರದೇಶದಲ್ಲಿ ಹತ್ಯೆಯಾದ ದರೋಡೆಕೋರ ಅತೀಕ್ ಅಹ್ಮದ್‍ನಿಂದ (Atiq Ahmed) ವಶ ಪಡಿಸಿಕೊಂಡ ಭೂಮಿಯನ್ನು ಬಡವರಿಗೆ ಹಂಚಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಗ್‍ರಾಜ್ (Prayagraj) ಬಳಿಯ ಲುಕರ್ಗಂಜ್ ಬಳಿ ಸ್ವಾಧೀನಪಡಿಸಿಕೊಂಡ ನಂತರ 1731 ಚದರ ಮೀಟರ್ ಭೂಮಿಯಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) 2021ರ ಡಿಸೆಂಬರ್ 26 ರಂದು ವಸತಿ ಯೋಜನೆಯ ಶಂಕು ಸ್ಥಾಪನೆ ಮಾಡಿದ್ದರು. ಬಳಿಕ ಭೂಮಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಎರಡು ಬ್ಲಾಕ್‍ಗಳಲ್ಲಿ 76 ಫ್ಲಾಟ್‍ಗಳನ್ನು ನಿರ್ಮಿಸುವ ಕಾರ್ಯ ನಡೆಯುತ್ತಿದೆ. ಕಾಮಗಾರಿ ಮುಕ್ತಾಯದ ನಂತರ ಫಲಾನುಭವಿಗಳಿಗೆ ಯೋಗಿ ಹಂಚಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅತೀಕ್ ಅಹ್ಮದ್ 2005 ರಲ್ಲಿ ಬಹುಜನ ಸಮಾಜ ಪಕ್ಷದ (BSP) ಶಾಸಕ ರಾಜು ಪಾಲ್ ಅವರ ಹತ್ಯೆಯ ಆರೋಪಿಯಾಗಿದ್ದ. ಅಲ್ಲದೆ ಫೆಬ್ರವರಿಯಲ್ಲಿ ಆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಅವರ ಹತ್ಯೆಯಲ್ಲಿ ಆತನ ಕೈವಾಡ ಇದೆ ಎಂದು ಆರೋಪಿಸಲಾಗಿತ್ತು. ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅಹ್ಮದ್‍ನನ್ನು ಏ.15ರ ರಾತ್ರಿ ಪ್ರಯಾಗ್‍ರಾಜ್‍ನಲ್ಲಿ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತಿದ್ದಾಗ ಪತ್ರಕರ್ತರ ಸೋಗಿನಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!