ಉತ್ತರ ಪ್ರದೇಶದಲ್ಲಿ ಮನೆಯ ಛಾವಣಿ ಕುಸಿತ: 2 ವರ್ಷದ ಮಗು ಸೇರಿ ಮೂವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಪ್ರದೇಶದ ಡಿಯೋರಿಯಾದಲ್ಲಿ ಭಾರೀ ಮಳೆಗೆ ಎರಡನೇ ಅಂತಸ್ತಿನ ಕಟ್ಟಡದ ಮೇಲ್ಛಾವಣಿ ಕುಸಿದು ಮೂವರು ಮೃತಪಟ್ಟಿದ್ದಾರೆ.
ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ದಿಲೀಪ್, ಚಾಂದಿನಿ ಹಾಗೂ ಅವರ ಎರಡು ವರ್ಷದ ಮಗು ಎಂದು ಗುರುತಿಸಲಾಗಿದೆ.
ಅಧಿಕಾರಿಗಳು ತಕ್ಷಣವೇ ಆಗಮಿಸಿ ಅಕ್ಕಪಕ್ಕದ ಮನೆಗಳನ್ನು ತೆರವು ಮಾಡಿದ್ದಾರೆ. ಮೇಲ್ಛಾವಣಿ ಕುಸಿಯಲು ಕಾರಣವೇನು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಟ್ಟಡ ಕುಸಿದ ನಂತರ ಮೂರು ಮೃತದೇಹಗಳನ್ನು ಹರತೆಗೆಯಲಾಗಿದೆ.
ಎರಡು ದಿನಗಳಿಂದ ಜೋರು ಮಳೆಯಾಗುತ್ತಿದ್ದು, ಮೇಲ್ನೋಟಕ್ಕೆ ಮಳೆಯಿಂದಾಗಿ ಮನೆ ಕುಸಿದಿದೆ ಎಂದು ಅಂದಾಜಿಸಲಾಗಿದೆ. ಸಿಎಂ ಯೋಗಿ ಆದಿತ್ಯನಾಥ್ ಮೃತರಿಗೆ ಸಂತಾಪ ಚೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ನಾಲ್ಕು ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!