ಆಕಸ್ಮಿಕ ಸ್ಫೋಟದಿಂದ ಮನೆ ಗೋಡೆ ಕುಸಿತ: ಮಕ್ಕಳು ಸೇರಿದಂತೆ ಆರು ಮಂದಿಗೆ ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಆಕಸ್ಮಿಕ ಸ್ಫೋಟಗೊಂಡು ಮನೆ ಗೋಡೆ ಕುಸಿದು ಆರು ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ನಗರದ ಮಧುಗಿರಿ ರಸ್ತೆಯ ಪಾರ್ಕ್‌ನಲ್ಲಿ ನಡೆದಿದೆ. ಮೊಹಲ್ಲಾದ ನಜೀರ್ ಎಂಬುವವರ ಮನೆ ಕುಸಿದು ಬಿದ್ದಿದೆ. ಸ್ಫೋಟಕ್ಕೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ಸ್ಫೋಟದಲ್ಲಿ ಆರು ಮಂದಿ ಗಾಯಗೊಂಡಿದ್ದು, ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಆಕಸ್ಮಿಕ ಸ್ಫೋಟಕ್ಕೆ ಕುಸಿದು ಬಿದ್ದ ಮನೆ ಗೋಡೆ ಆರಂಭದಲ್ಲಿ ಸಿಲಿಂಡರ್ ಸ್ಫೋಟ ಎಂಬ ಅನುಮಾನ ವ್ಯಕ್ತವಾಗಿತ್ತು. ಆದರೆ, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಸಿಲಿಂಡರ್ ಸ್ಫೋಟವಲ್ಲ ಎಂಬುದು ತಿಳಿದುಬಂದಿದೆ. ಘಟನೆಗೆ ನಿಖರ ಕಾರಣ ಪತ್ತೆ ಹಚ್ಚಲು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಶಾಸಕ ಟಿ.ಬಿ. ಜಯಚಂದ್ರ ಭೇಟಿ ನೀಡಿದ್ದು, ತುಮಕೂರು ಎಸ್​ಪಿ ಕೆ ವಿ ಅಶೋಕ್ ಬಳಿ ಮಾಹಿತಿ ಪಡೆದಿದ್ದಾರೆ. ಸ್ಫೋಟದ ಹಿಂದಿರುವ ಕಾರಣ ತಿಳಿಸಲು ಸೂಚಿಸಿದ್ದಾರೆ. ಇತ್ತ ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!