Thursday, November 20, 2025

ಹಾಸನದಲ್ಲಿ ಭಾರೀ ಮಳೆಗೆ ಮನೆ ಗೋಡೆ ಕುಸಿತ: ವೃದ್ಧೆ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಗೋಡೆ ಕುಸಿದು ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಅರಕಲಗೂಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಜವರಮ್ಮ (63) ಎಂದು ಗುರುತಿಸಲಾಗಿದೆ. ಮುಂಜಾನೆ 5:30ರ ಸುಮಾರಿಗೆ ಈ ಘಟನೆ ನಡೆದಿದೆ. ಇನ್ನೂ ಮನೆಯಲ್ಲಿ ಮಲಗಿದ್ದ ವೃದ್ಧೆಯ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ. 

ಸ್ಥಳಕ್ಕೆ ಸ್ಥಳೀಯ ಶಾಸಕ ಎ.ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

error: Content is protected !!