ವಿಜಯಪುರದಲ್ಲಿ ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ, ಸ್ಥಳದಲ್ಲೇ ಗೃಹಿಣಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾತ್ರಿಯಿಡಿ ಭಾರೀ ಮಳೆ ಸುರಿದ ಪರಿಣಾಮ ಮನೆಯ ಮೇಲ್ಛಾವಣಿ ಕುಸಿದು ಮನೆಯಲ್ಲಿ ಮಲಗಿದ್ದ ಗೃಹಿಣಿ ಸಾವನ್ನಪ್ಪಿದ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ಘಟನೆ ನಡೆದಿದೆ. ಸಂಗೀತಾ ಗಂಡ ಬಾಳಾಸಾಹೇಬ ಪಾಟೀಲ್ (30)ಮೃತ ಮಹಿಳೆ.

ಭಾನುವಾರ ತಡರಾತ್ರಿ ಮನೆಯಲ್ಲಿ ಮಲಗಿದ್ದಾಗ ಅವಘಡ ಸಂಭವಿಸಿದೆ. ಮಳೆಯಿಂದಾಗಿ ಮನೆ ಸೋರುತ್ತಿದ್ದ ವೇಳೆ ಮನೆಯಿಂದ ಎದ್ದು ಹೊರ ಬಂದು ಪತಿ ಹಾಗೂ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಆದರೆ ಗೃಹಿಣಿ ಸಂಗೀತಾ ಮೇಲೆ ಮೇಲ್ಛಾವಣಿ ಬಿದ್ದ ಕಾರಣ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ತದನಂತರ ಸ್ಥಳೀಯರು ಮಣ್ಣಲ್ಲಿ ಮುಚ್ಚಿಹೋಗಿದ್ದ ಸಂಗೀತಾ ಮೃತದೇಹವನ್ನು ಹೊರತೆಗೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!