June 26, 2026
Friday, June 26, 2026
spot_img

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನೇಣಿಗೆ ಕೊರಳೊಡ್ಡಿದ ಗೃಹಿಣಿ

ಹೊಸದಿಗಂತ ವರದಿ ಬೆಳಗಾವಿ:

ಇಲ್ಲಿನ ಜ್ಯೋತಿ ನಗರದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಶ್ರೀನಿಧಿ ಸಂತೋಷ್ ನಾವಿ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.

ಶ್ರೀನಿಧಿ ಹಾಗೂ ಸಂತೋಷ್ 2021ರಲ್ಲಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಗಂಡ, ಹೆಂಡತಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಕೌಟುಂಬಿಕ ಕಲಹ, ಕಿರುಕುಳಕ್ಕೆ ಬೇಸತ್ತು ಮನೆಯ ಮೊದಲ ಮಹಡಿಯಲ್ಲಿ ಗೃಹಿಣಿ ನೇಣಿಗೆ ಶರಣಾಗಿದ್ದಾರೆ.

ಇದನ್ನೂ ಓದಿ:

ತವರು ಮನೆಯವರೊಂದಿಗೆ ಮಾತನಾಡಬಾರದೆಂದು ಮೊಬೈಲ್ ಫೋನ್ ಕಿತ್ತುಕೊಂಡಿದ್ದರು ಎಂದು ಶ್ರೀನಿಧಿ ಕುಟುಂಬಸ್ಥರು ಆರೋಪಿಸಿದ್ದಾರೆ. ಗಂಡ, ಅತ್ತೆ ಹಾಗೂ ಇನ್ನಿಬ್ಬರೂ ಸಂಬಂಧಿಕರ ವಿರುದ್ಧ ಶ್ರೀನಿಧಿ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ದೂರು ನೀಡಿದ್ದಾರೆ. ಘಟನೆ ಸಂಬಂಧ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !