ರಾಜ್ಯದ ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ಯೋಜನೆ: ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾರ್ವಜನಿಕರಿಗೆ ಕೈಗೆಟುವ ದರದಲ್ಲಿ ರಾಜ್ಯದಲ್ಲಿ ನಿವೇಶನ ಒದಗಿಸಲು ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಆಯ್ದ ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿದೆ. ಇದರಿಂದಾಗಿ ಸಾಕಷ್ಟು ಜನರಿಗೆ ಅನುಕೂಲವಾಗಲಿದೆ ಎಂದು ಸಿಎಂ ಹೇಳಿದ್ದಾರೆ.

ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ ಬಡಾವಣೆಯಲ್ಲಿ ಕೈಗೆಟುಕುವ ದರದಲ್ಲಿ ನಿವೇಶನಗಳನ್ನು ಒದಗಿಸಲಾಗುವುದು. ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಮಂಗಳೂರು, ಬಳ್ಳಾರಿ, ಕಲಬುರಗಿ ಹಾಗೂ ಬೆಳಗಾವಿಯಲ್ಲಿ ವಸತಿ ಬಡಾವಣೆ ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ.

ಬಡ ಹಾಗೂ ಮಧ್ಯಮ ವರ್ಗದವರಿಗೆ ಸ್ವಂತ ಸೂರು ಜೀವಮಾನದ ಕನಸು, ಈ ಕನಸನ್ನು ನನಸಾಗಿಸಲು ನಾವು ಆಸರೆಯಾಗಿ ನಿಲ್ಲುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!