ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹೌತಿ ಬಂಡುಕೋರರು ಬೆನ್ ಗುರಿಯನ್ ವಿಮಾನ ನಿಲ್ದಾಣದಲ್ಲಿ ಕ್ಷಿಪಣಿ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾವು ಮುಂದಿನ ಎರಡು ದಿನಗಳ ಕಾಲ ಇಸ್ರೇಲ್ ರಾಜಧಾನಿ ಟೆಲ್ ಅವಿವ್ಗೆ ತನ್ನ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಿದೆ.
ಏರ್ ಇಂಡಿಯಾವು ತನ್ನ ಗ್ರಾಹಕರು ಹಾಗೂ ಸಿಬ್ಬಂದಿಯ ಸುರಕ್ಷತೆಗೆ ಹೆಚ್ಚು ಒತ್ತು ನೀಡುತ್ತದೆ. ಇವರ ಸುರಕ್ಷತೆಯ ದೃಷ್ಟಿಯಲ್ಲಿ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಸಂಸ್ಥೆ ಹೇಳಿದೆ.
ಕ್ಷಿಪಣಿ ದಾಳಿ ಮಾಹಿತಿ ಲಭ್ಯವಾದ ಬೆನ್ನಲ್ಲೇ ದಿಲ್ಲಿಯಿಂದ ಟೆಲ್ ಅವಿವ್ಗೆ ಹೋಗುತ್ತಿದ್ದ ವಿಮಾನವನ್ನು ಅಬುಧಾಬಿಗೆ ತಿರುಗಿಸಲಾಯಿತು ಎಂದು ವಿಮಾನಯಾನ ಸಂಸ್ಥೆ ತಿಳಿಸಿವೆ. ಇದೇ ವೇಳೆ ಇಸ್ರೇಲ್ಗೆ ಟಿಕೆಟ್ ಪಡೆದಿರುವವರಿಗೆ ವಿನಾಯಿತಿ ಅಥವಾ ವಿಮಾನಯಾನದ ಮರು ವೇಳಾಪಟ್ಟಿ ನೀಡಲಾಗುವುದು ಎಂದು ಏರ್ ಇಂಡಿಯಾ ಹೇಳಿದೆ.