ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಸಕ ಮುನಿರತ್ನ ಮೇಲಿನ ಅತ್ಯಾಚಾರ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಪರಮೇಶ್ವರ್ “ಪಬ್ಲಿಕ್ ಸರ್ವೆಂಟ್ಸ್ ಈ ರೀತಿ ಹೇಗೆ ಮಾಡುತ್ತಾರೆ?” ದೂರಿನ ಮೇರೆಗೆ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ನಾವು ದ್ವೇಷದ ರಾಜಕಾರಣ ಮಾಡುವುದಿಲ್ಲ. ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ. ನಾವು ದ್ವೇಷದ ರಾಜಕಾರಣ ಮಾಡುವ ಅಗತ್ಯವಿಲ್ಲ. ಜನ ನಮ್ಮನ್ನು ಗೆಲ್ಲಿಸಿದ್ದಾರೆ. ಅದರಂತೆ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.