ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾತಿಗಣತಿ ವರದಿ ಓದದೇ ಅವೈಜ್ಞಾನಿಕ ಅಂದ್ರೆ ಹೇಗೆ? ಅವೈಜ್ಞಾನಿಕ, ತಪ್ಪು ವರದಿ ಇವೆಲ್ಲಾ ಸಮಾಜ ದ್ರೋಹಿ ಮಾತುಗಳು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.
ಜಾತಿಗಣತಿ ವಿವರಗಳು ಬಹುತೇಕ ಬಹಿರಂಗಗೊಂಡಿವೆ. ನಮಗೂ ಅದರ ಪ್ರತಿಗಳು ದೊರೆತಿವೆ. ಇದರಲ್ಲಿ ರಾಜಕಾರಣ ಮಾಡಲು ಹೋಗಬಾರದು. ಸಮೀಕ್ಷೆಗಳು ಏನಿವೆ ಎಂಬುದು ಗೊತ್ತಿಲ್ಲದೆ ಅಭಿಪ್ರಾಯಗಳನ್ನು ಕೊಡುತ್ತಿದ್ದಾರೆ ಇದು ತಪ್ಪು ಎಂದು ವಾಗ್ದಾಳಿ ನಡೆಸಿದ್ದಾರೆ.