March 30, 2026
Monday, March 30, 2026
spot_img

WEATHER | ಎಂಥ ಚಳಿ ಮಾರ್ರೆ! ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಥಂಡಿ ಹೆಚ್ಚಾಗುತ್ತಂತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದೆ. ಇಂದು ಸಹ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಹೆಚ್ಚಿನ ಚಳಿ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !