ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಕ್ಕಿಂನ ಗ್ಯಾಲ್ಶಿಂಗ್‌ನಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 32 ವರ್ಷದ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆಯ ದೂರಿನ ಪ್ರಕಾರ, ಶಿಕ್ಷಕನು ಹೋಂ ವರ್ಕ್ ಮಾಡಿಸುವ ನೆಪದಲ್ಲಿ ಗ್ಯಾಲ್ಶಿಂಗ್ ಪಟ್ಟಣದ ತನ್ನ ಬಾಡಿಗೆ ಕೋಣೆಗೆ ಕರೆದೊಯ್ದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೂರು ಸ್ವೀಕರಿಸಿದ ನಂತರ, ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಂಡು, ಆಕೆಯನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಸ್ತಾಂತರಿಸಿ ವೈದ್ಯಕೀಯ ಪರೀಕ್ಷೆಗಾಗಿ ಗ್ಯಾಲ್ಶಿಂಗ್ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.

