ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದಲ್ಲಿ ಶುಕ್ರವಾರ ರಾತ್ರಿ ಭೀಕರ ರೈಲು ಅಪಘಾತ ಸಂಭವಿಸಿದೆ. ಈವರೆಗೂ 233 ಮಂದಿ ಮೃತಪಟ್ಟಿದ್ದು, 900 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಮೃತರ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ.
ಈ ಅಪಘಾತ ಸಂಭವಿಸಿದ್ದು ಹೇಗೆ?
ಘಟನಾ ಸ್ಥಳದಲ್ಲಿ ಮೂರು ರೈಲುಗಳಿದ್ದರು. ಕೊಲ್ತತ್ತಾದ ಶಾಲಿಮಾರ್ ರೈಲ್ವೇ ನಿಲ್ದಾಣದಿಂದ ಕೋರಮಂಡಲ್ ಎಕ್ಸ್‌ಪ್ರೆಸ್ ಚೆನ್ನೈಗೆ ಹೊರಟಿತ್ತು. ಈ ರೈಲು ಒಡಿಶಾದ ಬಹನಗಾ ಬಜಾರ್ ಸ್ಟೇಷನ್ ಬಳಿ ಹಳಿ ತಪ್ಪಿ ಪಕ್ಕದಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮವಾಗಿ ಕೋರಮಂಡಲ್‌ನ 12 ಬೋಗಿಗಳು ಹಳಿ ತಪ್ಪಿ ಮೂರನೇ ರೈಲು ಮಾರ್ಗದ ಮೇಲೆ ಬಿದ್ದಿವೆ.
ಸ್ವಲ್ಪ ಸಮಯದ ನಂತರ ಇದೇ ಮಾರ್ಗವಾಗಿ ಬಂದ ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಬಿದ್ದಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌ನ ಹಳಿಗಳಿಗೆ ಡಿಕ್ಕಿ ಹೊಡೆದಿದೆ. ಕೋರಮಂಡಲ್ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿಯಾದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ 20 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು, ಗಂಭೀರವಾಗಿ ಗಾಯಗೊಂಡವರಿಗೆ ಎರಡು ಲಕ್ಷ ರೂ ಹಾಗೂ ಸಣ್ಣ ಗಾಯಗಳಾದವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ.