Sunday, December 3, 2023

Latest Posts

ನಟ ಬ್ಯಾಂಕ್ ಜನಾರ್ದನ್ ಅರೋಗ್ಯ ಹೇಗಿದೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ದನ್ (Bank Janardhan) ಅವರಿಗೆ ಹೃದಯಾಘಾತವಾಗಿ (Heart Attack), ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗಲೂ ಅವರಿಗೆ ಐಸಿಯುವಿನಲ್ಲೇ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸುಧಾರಿಸಿದೆ.

ಈ ಕುರಿತು ಅವರನ್ನು ಭೇಟಿಯಾಗಿ ಬಂದ ಅನೇಕ ಸಹ ಕಲಾವಿದರುಮಾಹಿತಿ ನೀಡಿದ್ದಾರೆ.

ಬ್ಯಾಂಕ್ ಜನಾರ್ದನ್ ಅವರಿಗೆ 74 ವರ್ಷ ವಯಸ್ಸು. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಸಿನಿಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಜನಾರ್ದನ್. ಹಾಸ್ಯ ನಟರಾಗಿ ಸಾಕಷ್ಟು ಪಾತ್ರಗಳನ್ನು ಅವರು ನಿರ್ವಹಿಸಿದ್ದಾರೆ.

ಬ್ಯಾಂಕ್ ಜನಾರ್ದನ್ ಅವರಿಗೆ ಈಗಾಗಲೇ ಎರಡು ಬಾರಿ ಹೃದಯಾಘಾತವಾಗಿದೆ ಎನ್ನುವ ಮಾಹಿತಿ ಇದೆ. ಇದು ಮೂರನೇ ಬಾರಿ ಆಗಿದ್ದರಿಂದ ಗೆಳೆಯರು ಮತ್ತು ಬಂಧುಗಳು ಆತಂಕಗೊಂಡಿದ್ದರು. ಅಭಿಮಾನಿಗಳ ಹಾರೈಕೆಯಿಂದಾಗಿ ಅವರು ಗುಣಮುಖರಾಗುತ್ತಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!