February 9, 2026
Monday, February 9, 2026
spot_img

ಹರ್ಷಿತ್ ರಾಣಾ ಆರೋಗ್ಯ ಹೇಗಿದೆ? ಅಪ್ ಡೇಟ್ ನೀಡಿದ್ರು ಯುವ ವೇಗಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್ ಆರಂಭಕ್ಕೂ ಟೀಮ್ ಇಂಡಿಯಾದಿಂದ ಹೊರಬಿದ್ದ ಯುವ ವೇಗಿ ಹರ್ಷಿತ್ ರಾಣಾ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿ ಮೈದಾನ ತೊರೆದಿದ್ದ ರಾಣಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋ ಹಂಚಿಕೊಂಡಿದ್ದು, ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿರುವ ಫೋಟೋವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದು, ಬೇಗನೇ ಚೇತರಿಸಿಕೊಂಡು ಮತ್ತೆ ತಂಡಕ್ಕೆ ಮರಳುವುದಾಗಿ ತಿಳಿಸಿದ್ದಾರೆ.

ಪಂದ್ಯದ ಸಮಯದಲ್ಲಿ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದ ರಾಣಾ ಅವರನ್ನು ಟಿ20 ವಿಶ್ವಕಪ್​ನಿಂದ ಹೊರಗಿಡಲಾಗಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !