ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದ ಬಗ್ಗೆ ಅಪೋಲೊ ಆಸ್ಪತ್ರೆಯ ವೈದ್ಯಕೀಯ ತಂಡ ಹೇಳಿಕೆ ಬಿಡುಗಡೆ ಮಾಡಿದೆ.
ಅಸಿಡಿಟಿ ಹೆಚ್ಚಾದ ಕಾರಣ ಶಕ್ತಿಕಾಂತ್ ದಾಸ್ ಗೆ ಅನಾರೋಗ್ಯ ಉಂಟಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಪೋಲೋ ವೈದ್ಯರು ತಿಳಿಸಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಯಾವುದೇ ಆತಂಕಕ್ಕೆ ಕಾರಣವಿಲ್ಲ. ಶೀಘ್ರದಲ್ಲೇ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದ” ಎಂದು ಅಪೋಲೋ ಆಸ್ಪತ್ರೆಗಳ ವೈದ್ಯಕೀಯ ಸೇವೆಗಳ ನಿರ್ದೇಶಕ ಡಾ ಆರ್ ಕೆ ವೆಂಕಟಾಸಲಂ ಅವರು ವೈದ್ಯಕೀಯ ಬುಲೆಟಿನ್ ಪ್ರಕಟಿಸಿದ್ದಾರೆ.