ಸದ್ಗುರು ಜಗ್ಗಿ ವಾಸುದೇವ್ ಈಗ ಹೇಗಿದ್ದಾರೆ?: ಈ ವಿಡಿಯೋ ಹೇಳುತ್ತೆ ನೋಡಿ ಆರೋಗ್ಯದ ಅಪ್ ಡೇಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸದ್ಗುರು ಜಗ್ಗಿ ವಾಸುದೇವ್ ಅವರು ಇತ್ತೀಚೆಗೆ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇದೀಗ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಅವರು ತಮ್ಮ ಬೆಂಬಲಿಗರೊಂದಿಗೆ ಆರೋಗ್ಯದ ಮಾಹಿತಿ ಹಂಚಿಕೊಳ್ಳುತ್ತಿದ್ದಾರೆ. ಇದೀಗ ಅವರು ಆಸ್ಪತ್ರೆಯ ಕೊಠಡಿಯೊಳಗಿನ ವಿಡಿಯೋ ಹಂಚಿಕೊಂಡಿದ್ದಾರೆ.

ಸದ್ಗುರುಗಳು ದೆಹಲಿಯಲ್ಲಿ ಶೀಘ್ರವಾಗಿ ಚೇತರಿಸಿಕೊಳ್ಳುವ ಹಾದಿಯಲ್ಲಿದ್ದಾರೆ ಎಂದು ಬರೆದಿದ್ದಾರೆ. ಸದ್ಗುರುಗಳು ತಲೆಯ ಮೇಲೆ ದೊಡ್ಡ ಬ್ಯಾಂಡೇಜ್ ನೊಂದಿಗೆ ಆಸ್ಪತ್ರೆಯ ಹಾಸಿಗೆಯ ಮೇಲೆ ಕುಳಿತು ದಿನಪತ್ರಿಕೆ ಓದುತ್ತಿರುವುದನ್ನು ವಿಡಿಯೋ ಹಂಚಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!