ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ಹೇಗಿದೆ?: ಪತ್ನಿ ನೀಡಿದ್ರು ಹೆಲ್ತ್ ಅಪ್‌ಡೇಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ನಟನ ಅನಾರೋಗ್ಯದ ಕುರಿತು ಫ್ಯಾನ್ಸ್‌ಗೆ ರಜನಿಕಾಂತ್ ಪತ್ನಿ ಹೆಲ್ತ್ ಅಪ್‌ಡೇಟ್ ತಿಳಿಸಿದ್ದಾರೆ. ಆತಂಕಪಡಬೇಡಿ, ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಜನಿಕಾಂತ್‌ರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಸೂಕ್ತ ಚಿಕಿತ್ಸೆ ಕೂಡ ನೀಡಲಾಗಿದೆ. ಇದೀಗ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂದು ಸಂಜೆ ಅಥವಾ ನಾಳೆ ಅವರು ಡಿಸ್ಚಾರ್ಜ್ ಆಗಲಿದ್ದಾರೆ ಎನ್ನಲಾಗಿದೆ.

73 ವರ್ಷದ ತಲೈವಾ ಅನಾರೋಗ್ಯದ ಸುದ್ದಿ ಕೇಳಿ ಆತಂಕಕ್ಕೆ ಒಳಗಾಗಿದ್ದ ಅಭಿಮಾನಿಗಳಿಗೆ ರಜನಿಕಾಂತ್ ಪತ್ನಿ ಲತಾ ಸ್ಪಷ್ಟನೆ ನೀಡಿದ್ದಾರೆ. ಆತಂಕ ಪಡುವ ಅಗತ್ಯವಿಲ್ಲ. ರಜನಿಕಾಂತ್ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!