ತೆಲುಗಿನ ನಟ ಸಯಾಜಿ ಶಿಂಧೆ ಅರೋಗ್ಯ ಹೇಗಿದೆ?: ಇಲ್ಲಿದೆ ಅಪ್​ಡೇಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಲುಗಿನ ಖ್ಯಾತ ನಟ ಸಯಾಜಿ ಶಿಂಧೆ (Sayaji Shinde) ಅವರು ತೀವ್ರವಾಗಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, . ಈಗ ಎಲ್ಲಾ ರೀತಿಯ ಪರೀಕ್ಷೆಗಳನ್ನು ಮಾಡಲಾಗಿದ್ದು, ಅವರ ಹೃದಯದಲ್ಲಿ ಬ್ಲಾಕೇಜ್ ಇದೆ ಎನ್ನುವ ವಿಚಾರ ಗೊತ್ತಾಗಿದೆ. ಈಗ ವೈದ್ಯರು ಆ್ಯಂಜಿಯೋಪ್ಲಾಸ್ಟಿ ಮಾಡಿದ್ದು,ಆರೋಗ್ಯವಾಗಿದ್ದಾರೆ.

ಸಯಾಜಿ ಆಸ್ಪತ್ರೆಗೆ ದಾಖಲಾದ ವಿಚಾರ ಕೇಳಿ ಫ್ಯಾನ್ಸ್ ಆತಂಕಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ವಿಡಿಯೋ ಒಂದನ್ನು ಮಾಡಿ ಪೋಸ್ಟ್ ಮಾಡಿದ್ದರು. ‘ನಾನು ಆರೋಗ್ಯವಾಗಿದ್ದೇನೆ. ನನ್ನ ಬಗ್ಗೆ ಕಾಳಜಿವಹಿಸುವ ಎಲ್ಲಾ ಅಭಿಮಾನಿಗಳು ಚಿಂತಿಸೋದು ಬೇಡ. ನಾನು ಶೀಘ್ರವೇ ನಿಮ್ಮನ್ನು ಮನರಂಜಿಸುತ್ತೇನೆ’ ಎಂದಿದ್ದಾರೆ ಸಯಾಜಿ. ‘ನಿಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಿ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಅವರು ಬೇಗ ರಿಕವರಿ ಆಗಲಿ ಎಂದು ಹಾರೈಸಿದ್ದಾರೆ.

ಇತ್ತೀಚೆಗೆ ಸಯಾಜಿ ಅವರಿಗೆ ಅನಾರೋಗ್ಯ ಕಾಡಿತ್ತು. ಈಗ ಅವರಿಗೆ ಎದೆನೋವು ಕೂಡ ಕಾಣಿಸಿಕೊಂಡಿರುವುದರಿಂದ ಕುಟುಂಬದವರು ಆತಂಕಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕ ಹೃದಯಕ್ಕೆ ಸಂಬಂಧಿಸಿದ ವಿವಿಧ ಪರೀಕ್ಷೆಗಳನ್ನು ಮಾಡಲಾಗಿದೆ. ಅವರ ಹೃದಯ ರಕ್ತನಾಳದಲ್ಲಿ ಶೇ.99 ಬ್ಲಾಕೇಜ್ ಇರುವ ವಿಚಾರ ಗೊತ್ತಾಗಿದೆ. ಸದ್ಯ ಅವರ ಆರೋಗ್ಯ ಸುಧಾರಿಸಿದೆ. ಅವರನ್ನು ಎರಡು ದಿನಗಳಲ್ಲಿ ಡಿಸ್ಚಾರ್ಜ್ ಮಾಡಲಾಗುವುದು ಎಂದು ವೈದ್ಯರು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!