Wednesday, November 19, 2025

ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಆರೋಗ್ಯ ಹೇಗಿದೆ? ಹೆಲ್ತ್ ಬುಲೆಟಿನ್ ಬಿಡುಗಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು,ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.ನುರಿತ ವೈದ್ಯರ ತಂಡವು ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ ಎಂದು ಆಸ್ಪತ್ರೆ ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಿದೆ.

ದೇವೇಗೌಡರ ಆರೋಗ್ಯದ ಬಗ್ಗೆ ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಸುಧಾರಣೆಯಾಗಿದೆ. ಚಿಕಿತ್ಸೆಯಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದೆ. ಇದರಿಂದ ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಇನ್ನು ದೇವೇಗೌಡರ ಆರೋಗ್ಯದ ಮೇಲೆ ವೈದ್ಯಕೀಯ ತಜ್ಞರ ತಂಡ ನಿಗಾವಹಿಸಿದೆ ಎಂದು ಮಾಹಿತಿ ನೀಡಿದೆ.

ಸೋಮವಾರ ರಾತ್ರಿ ಚಳಿ ಜ್ವರ ಹಾಗೂ ಸೋಂಕು ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಡಾ.ಸುದರ್ಶನ್‌ ಬಲ್ಲಾಳ್‌ ಅವರ ನೇತೃತ್ವದಲ್ಲಿ ತೀವ್ರಾ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು.

error: Content is protected !!