ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆ ಮತ್ತು ದೇಶದಿಂದ ನಿರ್ಗಮಿಸಿದ ಹೊರತಾಗಿಯೂ, ಢಾಕಾ ಮತ್ತು ಇತರ ನಗರಗಳಲ್ಲಿ ಪ್ರತಿಭಟನೆಗಳು ಮುಂದುವರೆದಿದೆ.
ಉತ್ತರ ಬಾಂಗ್ಲಾದೇಶದ ಶೇರ್ಪುರ್ ಜಿಲ್ಲೆಯಲ್ಲಿ, ಕೋಲುಗಳಿಂದ ಶಸ್ತ್ರಸಜ್ಜಿತವಾದ ಗುಂಪೊಂದು ಜಿಲ್ಲಾ ಕಾರಾಗೃಹಕ್ಕೆ ನುಗ್ಗಿ 500ಕ್ಕೂ ಹೆಚ್ಚು ಕೈದಿಗಳನ್ನು ಬಿಡುಗಡೆಗೊಳಿಸಿತು.
ಬಾಂಗ್ಲಾದೇಶ ಸೇನೆಯು ತಾತ್ಕಾಲಿಕವಾಗಿ ನಿಯಂತ್ರಣವನ್ನು ಪಡೆದುಕೊಂಡಿದೆ ಮತ್ತು ಹಿಂಸಾಚಾರವನ್ನು ನಿಲ್ಲಿಸುವಂತೆ ನಾಗರಿಕರನ್ನು ಒತ್ತಾಯಿಸಿದೆ. ಶೀಘ್ರದಲ್ಲೇ ಮಧ್ಯಂತರ ಸರ್ಕಾರ ಸ್ಥಾಪನೆಯಾಗುವ ನಿರೀಕ್ಷೆಯಿದೆ.