ಹೇಗಿದೆ ರಾಜ್ಯದಲ್ಲಿ ಇಂದಿನ ಹವಾಮಾನ? ಮಳೆ ಇದೆಯಾ? ಸೆಕೆಯಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ 24 ತಾಸುಗಳ ಅವಧಿಯಲ್ಲಿ ರಾಜ್ಯದ ಒಳನಾಡಿನ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದ್ದು, ಬಾಗಲಕೋಟೆ, ಹಾವೇರಿ, ಕೊಪ್ಪಳ, ದಾವಣಗೆರೆ, ಮಂಡ್ಯ ಭಾಗಗಳಲ್ಲಿ ಇಂದು ಗರಿಷ್ಠ ತಾಪಮಾನವು ಮಾಮೂಲಿಗಿಂತ ಎರಡು ಡಿಗ್ರಿ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.
ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ 35, ಕನಿಷ್ಠ 21 ಡಿಗ್ರಿ ಉಷ್ಣಾಂಶತೆ ಇರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!