ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಇದರ ನಡುವೆ ಕೆಲವೆಡೆ ಹಗುರ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರಿನ ಕೆಲವೆಡೆ, ಕರಾವಳಿ ಭಾಗಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನದ ಸಾಧ್ಯತೆಯಿದೆ ಎಂದು ವರದಿ ಮಾಡಿದೆ.
ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಹಾಗೂ ಒಣ ಹವಾಮಾನ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.