ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ 24 ತಾಸುಗಳಲ್ಲಿ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಒಂದೆರಡು ಕಡೆ ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಉಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.
ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು, ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಇಂದು ಗರಿಷ್ಠ 27, ಕನಿಷ್ಠ 18 ಡಿಗ್ರಿ ಉಷ್ಣಾಂಶ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಕಡಲು ಸಹಜ ಸ್ಥಿತಿಯಲ್ಲಿದ್ದು, ಮೀನುಗಾರರಿಗೆ ಯಾವುದೇ ಎಚ್ಚರಿಕೆಗಳನ್ನು ಇಲಾಖೆ ನೀಡಿಲ್ಲ.