ಕೇಂದ್ರ ಸಚಿವ ಎಚ್ .ಡಿ. ಕುಮಾರಸ್ವಾಮಿ ಆರೋಗ್ಯ ಹೇಗಿದೆ? ಪುತ್ರ ನಿಖಿಲ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಂದೆ-ತಾಯಿ ಆಶೀರ್ವಾದ, ಭಗವಂತನ ಕೃಪೆ, ನಿಮ್ಮೆಲ್ಲರ ಪ್ರೀತಿಯ ಹಾರೈಕೆಯಿಂದ ಕೇಂದ್ರ ಸಚಿವ ಎಚ್ .ಡಿ. ಕುಮಾರಸ್ವಾಮಿ ಆರೋಗ್ಯವಾಗಿದ್ದಾರೆ. ಯಾವುದೇ ಸಮಸ್ಯೆ ಇಲ್ಲ, ಯಾರು ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜನರೊಂದಿಗೆ ಜನತಾದಳ ಸಮಾವೇಶದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಮಾಧ್ಯಮಗಳು ಮತ್ತು ಕಾರ್ಯಕರ್ತರು ಕುಮಾರಣ್ಣನ ಆರೋಗ್ಯದಲ್ಲಿ ಏರುಪೇರಾಗಿದೆ ಅಂತ ಕೇಳುತ್ತಿದ್ದರು. ಹೀಗಾಗಿ 80 ಕ್ಷೇತ್ರಗಳಲ್ಲಿ ಸುತ್ತಾಡಿ ಅವರ ಜವಾಬ್ದಾರಿಯನ್ನು ನಾನು ಹೊರುತ್ತಿದ್ದೇನೆ. ಪ್ರತಿನಿತ್ಯ ನಾನು ನನ್ನ ಆಯಸ್ಸು ನನ್ನ ತಂದೆಗೆ ಕೊಡಬೇಕು ಅಂತ ದೇವರಲ್ಲಿ ಪ್ರಾರ್ಥನೆ ಮಾಡ್ತಿದ್ದೀನಿ. ನಾನು ಕೇವಲ ಮಗನಾಗಿ ಈ ಮಾತನ್ನು ಹೇಳುತ್ತಿಲ್ಲ ಎಂದರು.

ಕುಮಾರಣ್ಣ ಆರೋಗ್ಯದಲ್ಲಿ ಸಣ್ಣಪುಟ್ಟ ಏರುಪೇರಾಗಿದೆ. ಆದರೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಅವರು ಚೇತರಿಕೆ ಕಾಣುತ್ತಿದ್ದಾರೆ. ಶೀಘ್ರದಲ್ಲೆ ಸಂಪೂರ್ಣ ಗುಣಮುಖರಾಗುತ್ತಾರೆ. ದೇವೆಗೌಡರು, ಕುಮಾರಣ್ಣ ಇಬ್ಬರು ಸಹ ಶತಾಯುಷಿಗಳಾಗುತ್ತಾರೆ ಅನ್ನೋ ನಂಬಿಕೆ ಇದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!