ಹಸಿರು ಸೊಪ್ಪು ತಿನ್ನುವುದು ಆರೋಗ್ಯಕ್ಕೆ ಹೆಚ್ಚು ಉಪಯುಕ್ತವಾಗಿದೆ. ಪ್ರತಿದಿನ ಆಹಾರದಲ್ಲಿ ಒಂದಲ್ಲ ಒಂದು ರೀತಿಯ ಹಸಿರು ಸೊಪ್ಪುಗಳನ್ನು ಸೇರಿಸಿಕೊಳ್ಳಬೇಕು. ಇದರಿಂದ ಆರೋಗ್ಯಕರ ಜೀವನವನ್ನು ನಡೆಸಲು ಸಾಧ್ಯವಾಗುತ್ತದೆ. ಹಸಿರು ಸೊಪ್ಪು ಕಡಿಮೆ ಕೊಬ್ಬಿನಾಂಶ ಹೊಂದಿರುತ್ತವೆ. ಇವುಗಳಲ್ಲಿ ಪ್ರೋಟೀನ್, ಜೀವಸತ್ವಗಳು ಹಾಗೂ ಖನಿಜಗಳು ಸಮೃದ್ಧವಾಗಿವೆ. ಹಸಿರು ಸೊಪ್ಪಿನ ಬಗ್ಗೆ ಅನೇಕರಿಗೆ ತಿಳಿದಿದ್ದರೂ ಅವರು ಈ ತರಕಾರಿಗಳನ್ನು ತಿನ್ನಲು ಇಷ್ಟಪಡುವುದಿಲ್ಲ. ನಿಮಗೆ ಇಷ್ಟವಿಲ್ಲದಿದ್ದರೂ ಕೂಡ ನಿಮ್ಮ ಆಹಾರದಲ್ಲಿ ಹಸಿರು ಸೊಪ್ಪುಗಳನ್ನು ಸೇರಿಸುವುದು ಮುಖ್ಯವಾಗಿದೆ.
ಹಸಿರು ಸೊಪ್ಪು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ನಾರಿನಂಶ ಹೆಚ್ಚಾಗಿರುತ್ತದೆ. ಜೊತೆಗೆ ಇದರಲ್ಲಿ ಕಬ್ಬಿಣ, ಸತು ಹಾಗೂ ಫೋಲಿಕ್ ಆಮ್ಲವೂ ಸಮೃದ್ಧವಾಗಿದೆ. ನಾರಿನಂಶ ಹೆಚ್ಚಿರುವ ಹಸಿರು ಸೊಪ್ಪುಗಳನ್ನು ತಿನ್ನುವುದರಿಂದ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ. ಹಸಿರು ತರಕಾರಿಗಳಲ್ಲಿ ವಿಟಮಿನ್ ಎ ಮತ್ತು ಸಿ ಮತ್ತು ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿವೆ. ಇದರಿಂದಾಗಿ ವಾರಕ್ಕೆ ಕನಿಷ್ಠ ಮೂರು ಬಾರಿಯಾದರೂ ನಿಮ್ಮ ಆಹಾರದಲ್ಲಿ ಹಸಿರು ತರಕಾರಿಗಳನ್ನು ಸೇರಿಸಿಕೊಳ್ಳಬೇಕು. ಇದರ ಪರಿಣಾಮ ಹಲವು ರೀತಿಯ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಬಹುದು.