ಕಳೆದ 3 ವರ್ಷಗಳಲ್ಲಿ ಭಾರತೀಯ ಪೌರತ್ವ ತೊರೆದವರೆಷ್ಟು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಭಾರತದ ನೆಲವನ್ನರಿಸಿ ಅಕ್ರಮವಾಗಿ ಭಾರತಕ್ಕೆ ನುಗ್ಗುವವರ ಸಂಖ್ಯೆಯೇ ಹೆಚ್ಚು. ಆದರೆ ಪ್ರಸ್ತುತ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಗೃಹಸಚಿವಾಲಯ ಹೊರಹಾಕಿರುವ ಮಾಹಿತಿಯೊಂದು ಅಚ್ಚರಿ ಮೂಡುವಂತಿದೆ.

ಅಧಿವೇಶನದ ಸಂದರ್ಭದಲ್ಲಿ ಗೃಹ ಸಚಿವಾಲಯದ ರಾಜ್ಯ ಖಾತೆ ಸಚಿವ ನಿತ್ಯಾನಂದ ರೈ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿ ಲಿಖಿತ ರೂಪದಲ್ಲಿ ನೀಡಿದ ಮಾಹಿತಿಯೊಂದು ಈ ಅಂಕಿ ಅಂಶಗಳ ವಿವರಣೆಯನ್ನು ನೀಡುತ್ತದೆ. ಕಳೆದ ಮೂರು ವರ್ಷಗಳಲ್ಲಿ 3.92 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ. ಅವರಲ್ಲಿ ಅಮೆರಿಕ ಪೌರತ್ವ ಪಡೆದವರ ಸಂಖ್ಯೆ ಹೆಚ್ಚಿದ್ದು ಸುಮಾರು 1.70 ಲಕ್ಷ ಜನರು ಅಮೆರಿಕದ ಪೌರತ್ವವನ್ನು ಪಡೆದಿದ್ದಾರೆ.

ವಿದೇಶಾಂಗ ಸಚಿವಾಲಯ ನೀಡಿರುವ ವಿವರಗಳಪ್ರಕಾರ ಹಲವರು ವೈಯುಕ್ತಿಕ ಕಾರಣಗಳಿಂದ ಭಾರತೀಯ ಪೌರತ್ವವನ್ನು ತ್ಯಜಿಸಿದ್ದು 120ಕ್ಕೂ ಹೆಚ್ಚು ಬೇರೆ ಬೇರೆ ದೇಶಗಳಲ್ಲಿ ಪೌರತ್ವ ಪಡೆದಿದ್ದಾರೆ. 2019, 2020 ಮತ್ತು 2021 ರಲ್ಲಿ ಒಟ್ಟು 3,92,643 ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!