ಕಾಂಗ್ರೆಸ್‌ ಸರ್ಕಾರ ಕಳೆದ 10 ತಿಂಗಳ ಅವಧಿಯಲ್ಲಿ ಎಷ್ಟು ಉದ್ಯೋಗ ಸೃಷ್ಟಿಸಿದೆ ವಿವರ ನೀಡಲಿ: ಬಿಎಸ್‌ವೈ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಳೆದ 10 ತಿಂಗಳಲ್ಲಿ ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂಬ ವಿವರವನ್ನು ಬಹಿರಂಗಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಆಗ್ರಹಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ವಿಶ್ವಾಸಾರ್ಹ ನಾಯಕತ್ವ ಇಲ್ಲ. ಸರ್ಕಾರದ ಚಟುವಟಿಕೆಗಳಿಗೆ ಬೆಂಬಲವಿಲ್ಲ. ಕೇಂದ್ರ ಸರ್ಕಾರದ ಅನುದಾನದ ಬಗ್ಗೆ ಜನರನ್ನು ದಾರಿ ತಪ್ಪಿಸುವ ಮೂಲಕ ಬೆಂಬಲ ಪಡೆಯುವ ಭ್ರಮೆಯಲ್ಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಗುರುವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಚಿವ ಎಂ.ಬಿ. ಪಾಟೀಲ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರು ‘ಎಕ್ಸ್’ ಖಾತೆಯಲ್ಲಿಉದ್ಯೋಗ ಸೃಷ್ಟಿಸುತ್ತಿದ್ದಾರೆ. ಈ ಸರ್ಕಾರ ಕಳೆದ 10 ತಿಂಗಳಿಂದ ಒಂದೇ ಒಂದು ಉದ್ಯೋಗ ಸೃಷ್ಟಿಸಿಲ್ಲ. ಇದು ಕಾಂಗ್ರೆಸ್ ಸಾಧನೆ ಎಂದು ಲೇವಡಿ ಮಾಡಿದರು.

ರಾಜ್ಯ ಸರ್ಕಾರ ತಲಾ 10 ಕೆ.ಜಿ. ಉಚಿತ ಅಕ್ಕಿ ನೀಡುವುದಾಗಿ ಆಶ್ವಾಸನೆ ನೀಡಿತ್ತು. ಆದರೆ, ಈವರೆಗೂ ಒಂದೇ ಒಂದು ಕಾಳು ಅಕ್ಕಿ ನೀಡಿಲ್ಲ. ಇದು ಕಾಂಗ್ರೆಸ್‌ ಸಾಧನೆ. ಕೇಂದ್ರ ಕಿಸಾನ್‌ ಸಮ್ಮಾನ್ ಯೋಜನೆಯಡಿ ರಾಜ್ಯದ 54 ಲಕ್ಷ ರೈತರಿಗೆ ಕೇಂದ್ರ ಸರ್ಕಾರ ವರ್ಷಕ್ಕೆ 6 ಸಾವಿರ ರೂ. ನೀಡುತ್ತಿದೆ. ನಾನು ಮುಖ್ಯಮಂತ್ರಿ ಆಗಿದ್ದಾಗ 4 ಸಾವಿರ ರೂ. ಸೇರಿಸಿ ಕೊಡುತ್ತಿದೆ. ಈ ಸರ್ಕಾರ ಆ 4 ಸಾವಿರ ರೂ. ನಿಲ್ಲಿಸಿದೆ. ಏಕೆಂದರೆ, ಈ ಸರ್ಕಾರ ದಿವಾಳಿಯಾಗಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ ಎಂದು ಟಾಂಗ್‌ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!