‘ತಮ್ಮ ಭ್ರಷ್ಟಾಚಾರದ ದಾಹ ತೀರಲು ಇನ್ನೆಷ್ಟು ಪ್ರಾಮಾಣಿಕ ಅಧಿಕಾರಿಗಳ ಬಲಿ ಆಗಬೇಕು?’

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಳಗಾವಿ ತಹಶೀಲ್ದಾರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಕೊಂಡರುವ ಅಶೋಕ್, ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದಾಗಲೆಲ್ಲ ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರೆಂಟಿ ಎಂದು ವ್ಯಂಗ್ಯವಾಡಿದ್ದಾರೆ.

ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ, ️ಕೋಲಾರ ಡಿಸಿ ಡಿ.ಕೆ.ರವಿ ಆತ್ಮಹತ್ಯೆ️ಕಲ್ಬುರ್ಗಿಯ ದಕ್ಷ ಪೊಲೀಸ್‌ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಹತ್ಯೆ, ️ಅನ್ನಭಾಗ್ಯ ಹಗರಣದ ಸಾಕ್ಷ್ಯ ಸಂಗ್ರಹಿಸಿದ್ದ ಐ.ಎ.ಎಸ್‌ ಅಧಿಕಾರಿ ಅನುರಾಗ್‌ ತಿವಾರಿ ಉತ್ತರ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಸಾವು, ಹೂವಿನ ಹಡಗಲಿಯ ಡಿ.ವೈ.ಎಸ್.ಪಿ ಯಾಗಿದ್ದ ಅನುಪಮಾ ಶೆಣೈಗೆ ಕಿರುಕುಳ, ನೌಕರಿಗೆ ರಾಜೀನಾಮೆ, ಮೈಸೂರಿನ ಜಿಲ್ಲಾಧಿಕಾರಿ ಶಿಖಾ ಅವರಿಗೆ ಸಿಎಂ ಆಪ್ತರಿಂದ ಕಿರುಕುಳ, ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿಯಾಗಿದ್ದ ರಶ್ಮಿಯವರ ಮೇಲೆ ಹಾಡುಹಗಲೇ ಮಾರಣಾಂತಿಕ ಹಲ್ಲೆ, ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ, ️ಗ್ರಾಮೀಣಾಭಿವೃದ್ಧಿ ಇಲಾಖೆಯ ಲಂಚಕೋರತನಕ್ಕೆ ಬೇಸತ್ತು ದಾವಣಗೆರೆಯ ಗುತ್ತಿಗೆದಾರ ಪಿ.ಸಿ.ಗೌಡರ್ ಆತ್ಮಹತ್ಯೆ, ವರ್ಗಾವಣೆ ದಂಧೆಯ ಒತ್ತಡ, ಕಿರುಕುಳ ತಾಳಲಾರದೆ ಯಾದಗಿರಿ ಪಿಎಸ್ ಐ ಪರಶುರಾಮ್ ಹೃದಯಾಘಾತದಿಂದ ಸಾವು. ಸಚಿವರ ಆಪ್ತರ ಕಿರುಕುಳದಿಂದ ಬೆಳಗಾವಿಯ ಎಸ್ ಡಿಎ ರುದ್ರಣ್ಣ ಆತ್ಮಹತ್ಯೆ, ಸಿಎಂ ಸಿದ್ದರಾಮಯ್ಯನವರೇ ತಮ್ಮ ಭ್ರಷ್ಟಾಚಾರದ ದಾಹ ತೀರಲು ಇನ್ನೆಷ್ಟು ಪ್ರಾಮಾಣಿಕ ಅಧಿಕಾರಿಗಳ ಬಲಿ ಆಗಬೇಕು? ಎಂದು ಪ್ರಶ್ನಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!