Sunday, August 14, 2022

Latest Posts

ರಾಜ್ಯದಲ್ಲಿ ಈವರೆಗೆ ಎಷ್ಟು ಜನರಿಗೆ ಲಸಿಕೆ ನೀಡಲಾಗಿದೆ ಗೊತ್ತಾ?: ಮಾಹಿತಿ ಹಂಚಿಕೊಂಡ ಸಚಿವ ಡಾ.ಸುಧಾಕರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕರ್ನಾಟಕದಲ್ಲಿ ಈವರೆಗೆ 1,07,59,572 ಜನರಿಗೆ ಕೊರೋನಾ ಲಸಿಕೆ ನೀಡಲಾಗಿದ್ದು, 18 ರಿಂದ44 ವರ್ಷದೊಳಗಿನ 41,803 ಜನರಿಗೆ ಲಸಿಕೆ ಹಾಕಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ಮಾಹಿತಿ ನೀಡಿದರು .
ಇನ್ನು ಕರ್ನಾಟಕಕ್ಕೆ ಅಂದಾಜು 6.52 ಕೋಟಿ ಲಸಿಕೆ ಅಗತ್ಯವಿದೆ. ಹೀಗಾಗಿ ಸದ್ಯ ಕೇಂದ್ರ ಸರ್ಕಾರದ ಬಳಿ 2 ಕೋಟಿ ಕೊವಿಶೀಲ್ಡ್​, 1 ಕೋಟಿ ಕೊವ್ಯಾಕ್ಸಿನ್​ ಡೋಸ್​ ಲಸಿಕೆ ಒದಗಿಸುವಂತೆ ಬೇಡಿಕೆ ಇಟ್ಟಿದ್ದೇವೆ. ಸೇರಮ್ ಸಂಸ್ಥೆಯಿಂದ ಕೊವಿಶೀಲ್ಡ್​ ಲಸಿಕೆ ಪಡೆಯಲಾಗಿದೆ. ಭಾರತ್​ ಬಯೋಟೆಕ್​ ಸಂಸ್ಥೆ ಇನ್ನೂ ಕೊವ್ಯಾಕ್ಸಿನ್​ ಪೂರೈಸಿಲ್ಲ.
ಮೇ 3ನೇ ವಾರದಲ್ಲಿ ಕರ್ನಾಟಕಕ್ಕೆ ಮತ್ತಷ್ಟು ಲಸಿಕೆ ಸಿಗಲಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಸದ್ಯ 18 ವರ್ಷ ಮೇಲ್ಪಟ್ಟವರಿಗೆ ನೀಡಲು 3.5 ಲಕ್ಷ ಡೋಸ್ ಲಸಿಕೆ ಸಂಗ್ರಹವಿದೆ. 45 ವರ್ಷ ಮೇಲ್ಪಟ್ಟವರಿಗೆ ನೀಡಲು 6.5 ಲಕ್ಷ ಡೋಸ್ ಲಸಿಕೆ ದಾಸ್ತಾನಿದೆ ಎಂದು ಅವರು ವಿವರಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss