ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದಾದ ಬಳಿಕ ಎಷ್ಟು ಜನರು ಆಸ್ತಿ ಖರೀದಿ ಮಾಡಿದ್ದಾರೆ?: ಕೇಂದ್ರ ಸರಕಾರ ಮಾಹಿತಿ…

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು-ಕಾಶ್ಮೀರದಲ್ಲಿ ಈಗ ಅಭಿವೃದ್ಧಿಯ ಪರ್ವ ಶುರುವಾಗಿದೆ. ಇಲ್ಲಿ 370ನೇ ವಿಧಿ ರದ್ದಾದ ಬಳಿಕ ದೇಶದ ವಿವಿಧ ಭಾಗದ 34 ಜನರು ಆಸ್ತಿಗಳನ್ನು ಖರೀದಿ ಮಾಡಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಇಂದು ಮಾಹಿತಿ ನೀಡಿದೆ.
ಕೇಂದ್ರಾಡಳಿತ ಪ್ರದೇಶದಲ್ಲಿ ಹೊರಗಿನವರು ಈವರೆಗೂ ಎಷ್ಟು ಮಂದಿ ಆಸ್ತಿ ಮಾಡಿದ್ದಾರೆ ಎಂದು ಬಿಎಸ್​ಪಿ ಸಂಸದ ಹಾಜಿ ಫಜ್ಲುರ್​ ರೆಹಮಾನ್​ ಅವರ ಪ್ರಶ್ನೆಗೆ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಉತ್ತರಿಸಿದರು.
ಕಣಿವೆ ಪ್ರದೇಶದಲ್ಲಿ 370ನೇ ವಿಧಿ ರದ್ದಾದ ಬಳಿಕ ಎಲ್ಲರಿಗೂ ಅಸ್ತಿ ಖರೀದಿಗೆ ಮುಕ್ತ ಅವಕಾಶ ಸಿಕ್ಕಿದ್ದು, ಈವರೆಗೂ 34 ಜನರು ಆಸ್ತಿ ಪಡೆದುಕೊಂಡಿದ್ದಾರೆ.
ಆರ್ಟಿಕಲ್ 370 ರದ್ದತಿಯ ನಂತರ ಕೇಂದ್ರ ಸರ್ಕಾರ ಜಮ್ಮು- ಕಾಶ್ಮೀರವನ್ನುಎರಡು ಭಾಗಗಳಾಗಿ ಮಾಡಿ ಲಡಾಖ್‌ ಅನ್ನು ಪ್ರತ್ಯೇಕವಾಗಿ ಸೃಷ್ಟಿಸಿ ಎರಡಕ್ಕೂ ಕೇಂದ್ರಾಡಳಿತ ಪ್ರದೇಶ ಸ್ಥಾನಮಾನ ನೀಡಿದೆ. ಕಣಿವೆ ಪ್ರದೇಶದಲ್ಲದವರೂ ಕೂಡಾ ಇಲ್ಲಿ ಭೂಮಿ ಮತ್ತು ಆಸ್ತಿಗಳನ್ನು ಖರೀದಿ ಮಾಡಲು ಸರ್ಕಾರ ಹೊಸ ಭೂ ಸಂಗ್ರಹಣೆ ಕಾನೂನು ಜಾರಿ ಮಾಡಿದೆ ಎಂದು ಮಾಹಿತಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!