ಶಾಲೆ ಪ್ರವೇಶಕ್ಕೆ ಮಗುವಿಗೆ ಎಷ್ಟು ವರ್ಷ ಪೂರ್ಣಗೊಂಡಿರಬೇಕು?: ಪೋಷಕರಿಗೆ ಶಿಕ್ಷಣ ಸಚಿವರು ನೀಡಿದ್ರು ಬಹುಮುಖ್ಯ ಮಾಹಿತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಒಂದನೇ ತರಗತಿಗೆ ಮಗು ಸೇರಿಸಲು ಆರು ವರ್ಷ ಪೂರ್ಣಗೊಂಡಿರಬೇಕು. ಈ ನಿಯಮವನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೊಳಿಲಾಗುವುದು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ , ಒಂದನೇ ತರಗತಿ ಅಥವಾ ಶಾಲಾ ಶಿಕ್ಷಣಕ್ಕೆ ಪ್ರವೇಶ ಪಡೆಯಲು 6 ವರ್ಷ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಶಿಕ್ಷಣ ತಜ್ಞರ ಸಲಹೆ ಕೂಡ ಇದೇ ಆಗಿದೆ ಎಂದು ಹೇಳಿದ್ದಾರೆ.
ಈಗಾಗಲೇ 23 ರಾಜ್ಯಗಳಲ್ಲಿ ಈ ನಿಯಮ ಅಳವಡಿಸಿಕೊಳ್ಳಲಾಗಿದ್ದು, ಕರ್ನಾಟಕದಲ್ಲಿ ಮುಂದಿನ ಶೈಕ್ಷಣಿಕ ಸಾಲಿನಿಂದ ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ 6 ವರ್ಷ ಪೂರ್ಣಗೊಂಡಿರುವುದು ಕಡ್ಡಾಯವೆನ್ನುವ ನಿಯಮ ಅಳವಡಿಸಲಾಗುವುದು ಎಂದು ಹೇಳಿದ್ದಾರೆ.
ಕೊರೋನಾ ನಂತರ ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದು, ಕಲಿಕೆ ಸಾಮರ್ಥ್ಯ ಹೆಚ್ಚಿಸಲು 5 ಮತ್ತು 8ನೇ ತರಗತಿಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲು ಚಿಂತನೆ ಇದ್ದು, ಈ ಕುರಿತು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!