ಸಮಂತಾ ಹೆಜ್ಜೆ ಹಾಕಿದ ಐಟಂ ಸಾಂಗ್‌’ಗೆ ಪಡೆದ ಸಂಭಾವನೆ ಎಷ್ಟು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಊ ಅಂಟವಾ ಮಾವ..ಊಹು ಅಂಟವಾ ಮಾವ.. ಹಾಡು ಈಗಾಗಲೇ ಹಿಟ್ ಆಗಿದೆ. ಈ ಹಾಡಿನ ಬಗ್ಗೆ ಮತ್ತೊಂದು ಇಂಟರೆಸ್ಟಿಂಗ್ ಸುದ್ದಿ ಈಗ ಎಲ್ಲೆಡೆ ಹರಿದಾಡುತ್ತಿದೆ.
ಪುಷ್ಪ ಚಿತ್ರದಲ್ಲಿನ ಈ ಐಟಂ ಸಾಂಗ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ಧೂಳೆಬ್ಬಿಸುತ್ತಿದೆ. ಈ ಹಾಡಿಗೆ ಸೊಂಟ ಬಳುಕಿಸಿದ ನಟಿ ಸಮಂತಾಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ?
ಈ ಹಾಡಿಗೆ ಡ್ಯಾನ್ಸ್ ಮಾಡಲು ಸಮಂತಾ ಬರೋಬ್ಬರಿ 5 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.
ಈ ಬಗ್ಗೆ ಚಿತ್ರತಂಡವಾಲಿ, ಸಮಂತಾ ಅವರಾಗಲಿ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಒಟ್ಟು ದಾಂಪತ್ಯ ಜೀವನದಿಂದ ಹೊರಬಂದ ನಂತರ ಸಂತ ಹೆಚ್ಚು ಬೋಲ್ಡ್ ಲುಕ್ ನಲ್ಲಿ ಕಾಣಿಸಿಕೊಳ್ಳಲು ಹೆಚ್ಚು ಒಲವು ತೋರಿಸುತ್ತಿರೋದು ಅಭಿಮಾನಿಗಳಿಗೆ ಖುಷಿ ತಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!