‘ಸಾಮ್ರಾಟ್ ಪೃಥ್ವಿರಾಜ್’ ಮೊದಲ ದಿನ ಗಳಿಸಿದ್ದೆಷ್ಟು? ಇಲ್ಲಿದೆ ಬಾಕ್ಸಾಫೀಸ್ ಲೆಕ್ಕಾಚಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರ ಮೊದಲ ದಿನವೇ ಬಾಕ್ಸಾಫೀಸ್​ನಲ್ಲಿ ದಾಖಲೆ ಬರೆಯಬಹುದೆಂಬ ನಿರೀಕ್ಷೆ ಇತ್ತು. ನಿರೀಕ್ಷೆ ನಿಜವಾಗಿದೆಯೇ? ವಿವರ ಇಲ್ಲಿದೆ.
ಅಕ್ಷಯ್ ಕುಮಾರ್ ನಟನೆಯ ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾ ಬಿಡುಗಡೆಯಾಗುದ್ದು, ಚಿತ್ರ ದೊಡ್ಡ ಮಟ್ಟದ ನಿರೀಕ್ಷೆ ಮೂಡಿಸಿತ್ತು.
ಜೂನ್ 3ರಂದು ವಿಶ್ವಾದ್ಯಂತ ತೆರೆ ಕಂಡಿರುವ ಚಿತ್ರವು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.
ಬರೋಬ್ಬರಿ 300 ಕೋಟಿ ರೂ ವೆಚ್ಚದಲ್ಲಿ ತಯಾರಾಗಿರುವ ಈ ಚಿತ್ರ ಮೊದಲ ದಿನವೇ ಬಾಕ್ಸಾಫೀಸ್​ನಲ್ಲಿ ದಾಖಲೆ ಬರೆಯಬಹುದೆಂಬ ನಿರೀಕ್ಷೆ ಇತ್ತು. ಅದು ಸಾಧ್ಯವಾಗದೆ ಹೋದರೂ, ಸಿನಿಮಾವು ಉತ್ತಮ ಮೊತ್ತವನ್ನು ಗಳಿಸಿದೆ
. ಬಾಕ್ಸಾಫೀಸ್ ವಿಶ್ಲೇಶಕ ತರಣ್ ಆದರ್ಶ್ ಪ್ರಕಾರ ‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರವು ಮೊದಲ ದಿನದಂದು ಹಿಂದಿಯಲ್ಲಿ ಸುಮಾರು 10.71 ಕೋಟಿ ರೂಗಳನ್ನು ಗಳಿಕೆ ಮಾಡಿದೆ. ವೀಕೆಂಡ್ ಆಗಿರುವ ಕಾರಣ, ಶನಿವಾರ ಹಾಗೂ ಭಾನುವಾರ ಕಲೆಕ್ಷನ್​ನಲ್ಲಿ ಏರಿಕೆಯಾಗುವ ನಿರೀಕ್ಷೆ ಇದೆ.
ಚಿತ್ರವನ್ನು ಡಾ.ಚಂದ್ರಪ್ರಕಾಶ್ ದ್ವಿವೇದಿ ನಿರ್ದೇಶಿಸಿದ್ದಾರೆ. ಚಿತ್ರದ ಕತೆಯ ಕೆಲಸಕ್ಕೆ ಸುಮಾರು 18 ವರ್ಷಗಳನ್ನು ವ್ಯಯಿಸಲಾಗಿದೆ. ಸಾಕಷ್ಟು ಸಂಶೋಧನೆ ನಡೆಸಿ ಮೂಲಕ್ಕೆ ನಿಷ್ಠವಾಗಿ ಕತೆ ಮಾಡಲಾಗಿದೆ ಎಂದು ನಿರ್ದೇಶಕರು ಹೇಳಿಕೊಂಡಿದ್ದರು. ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದಾರೆ. ಸಂಜಯ್ ದತ್, ಸೋನು ಸೂದ್ ಮೊದಲಾದ ತಾರೆಯರು ಬಣ್ಣಹಚ್ಚಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!