‘ದಿ ಕಾಶ್ಮೀರ್ ಫೈಲ್ಸ್’ ಎರಡನೇ ದಿನದ ಬಾಕ್ಸಾಫೀಸ್​ ಕಲೆಕ್ಷನ್ ಎಷ್ಟು ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

‘ಕಾಶ್ಮೀರ್ ಫೈಲ್ಸ್’ ಸಿನಿಮಾ ಎರಡನೇ ದಿನಗಳಲ್ಲಿ ಬಾಕ್ಸ್ ಆಫೀಸ್ ನಲ್ಲೂ ಯಶಸ್ವಿ ಕಂಡಿದ್ದು, ಬರೋಬ್ಬರಿ 8.5 ಕೋಟಿ ರೂ.ಗಳನ್ನು ಬಾಚಿಕೊಂಡಿದೆ.
‘ದಿ ಕಾಶ್ಮೀರ್ ಫೈಲ್ಸ್’ ಹಲವು ಸೀಮಿತತೆಗಳ ನಡುವೆ ತೆರೆಕಂಡಿತ್ತು ಚಲನಚಿತ್ರ ಪ್ರೇಮಿಗಳ ಮೊದಲ ಆಯ್ಕೆಯಾಗಿ ಹೊರಹೊಮ್ಮಿರುವ ಚಿತ್ರವನ್ನು ಈಗಾಗಲೇ ಗಣ್ಯಾತಿಗಣ್ಯರು ಮೆಚ್ಚಿಕೊಂಡಿದ್ದಾರೆ. ಸಿನಿಮಾ ನೋಡಿರುವ ಹಲವರು ಚಿತ್ರ ಮಂದಿರದಿಂದ ಕಣ್ಣೀರಿಟ್ಟು ಹೊರ ಬಂದಿದ್ದಾರೆ.
ಇತ್ತ ಇದೇ ಸಮಯದಲ್ಲಿ ತೆರೆ ಕಂಡ ರಾಧೆ ಶ್ಯಾಮ್, ಬ್ಯಾಟ್‌ಮ್ಯಾನ್ ಮತ್ತು ಗಂಗೂಬಾಯಿ ಕಥಿಯಾವಾಡಿ ಸೇರಿದಂತೆ ದೊಡ್ಡ ಬಜೆಟ್ ಚಿತ್ರಗಳು ಚಿತ್ರಮಂದಿರಗಳಲ್ಲಿ ಓಡುತ್ತಿದ್ದರೂ ಇದರ ನಡುವೆ ಕಾಶ್ಮೀರ ಫೈಲ್ಸ್ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ.
. ವಿವೇಕ್ ಅಗ್ನಿಹೋತ್ರಿ ಅವರ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ನಲ್ಲಿ ಅನುಪಮ್ ಖೇರ್, ದರ್ಶನ್ ಕುಮಾರ್, ಮಿಥುನ್ ಚಕ್ರವರ್ತಿ ಮತ್ತು ಪಲ್ಲವಿ ಜೋಶಿ ಅವರ ತಾರಾಗಣ ಒಳಗೊಂಡಿದೆ.
1990 ರಲ್ಲಿ ಕಣಿವೆಯಲ್ಲಿದ್ದ ಎಲ್ಲವನ್ನೂ ಬಿಟ್ಟು ಹೋಗಬೇಕಾದ ಐದು ಲಕ್ಷಕ್ಕೂ ಹೆಚ್ಚು ಕಾಶ್ಮೀರಿ ಪಂಡಿತರ ದುಸ್ಥಿತಿಯನ್ನು ಹೊರತರುವ “ಪ್ರಾಮಾಣಿಕ” ಮತ್ತು “ಶ್ರದ್ಧೆಯ” ಪ್ರಯತ್ನಕ್ಕಾಗಿ ಚಲನಚಿತ್ರವನ್ನು ವ್ಯಾಪಕವಾಗಿ ಪ್ರಶಂಸಿಸಲಾಗುತ್ತಿದೆ.
‘ದಿ ಕಾಶ್ಮೀರ್ ಫೈಲ್ಸ್’ ತಂಡಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ:
‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಂಡ ಶನಿವಾರಸಂಜೆ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿದ್ದಾರೆ. ಈ ವೇಳೆ ಪ್ರಧಾನಿ ಚಿತ್ರವನ್ನು ಹಾಗೂ ಚಿತ್ರತಂಡವನ್ನು ಶ್ಲಾಘಿಸಿದ್ದಾರೆ. ‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ತುಂಬ ಖುಷಿ ಆಯಿತು. ನಮ್ಮ ಸಿನಿಮಾ ಬಗ್ಗೆ ಅವರು ಹೇಳಿದ ಪ್ರಶಂಸೆಯ ಮಾತುಗಳಿಂದಾಗಿ ಈ ಭೇಟಿ ತುಂಬ ವಿಶೇಷವಾಯಿತು’ ಎಂದು ನಿರ್ಮಾಪಕ ಅಭಿಷೇಕ್​ ಅಗರ್​ವಾಲ್​ ಟ್ವೀಟ್​ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!