ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲೆಯಲ್ಲಿ ಮಹಾಕುಂಭ 2025 ರ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪ್ರಪಂಚದಾದ್ಯಂತದ 40 ಕೋಟಿ ಭಕ್ತರನ್ನು ಸ್ವಾಗತಿಸಲು ನಗರವು ಸಜ್ಜಾಗಿದೆ.
ಉತ್ತರ ಪ್ರದೇಶವು ಈ ಕುಂಭ ಮೇಳದಿಂದ ಗಳಿಸುವ ಆದಾಯವೆಷ್ಟು ಎಂಬುದರ ಕುರಿತು ಮಾಹಿತಿ ಇಲ್ಲಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಾ, ಮಹಾಕುಂಭಕ್ಕೆ 40 ಕೋಟಿ ಭಕ್ತರು ಬರುವ ಸಾಧ್ಯತೆಯಿದೆ ಮತ್ತು ಇದು ಉತ್ತರ ಪ್ರದೇಶಕ್ಕೆ 2 ಲಕ್ಷ ಕೋಟಿ ರೂಪಾಯಿಗಳ ಆರ್ಥಿಕ ಬೆಳವಣಿಗೆಯನ್ನು ತರುವ ನಿರೀಕ್ಷೆಯಿದೆ ಎಂದು ಬಹಿರಂಗಪಡಿಸಿದ್ದಾರೆ.
ಮಹಾಕುಂಭವು ಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಪ್ರತಿಬಿಂಬವಾಗಿದೆ, ಇದು ಭಾರತ ಸೇರಿದಂತೆ ಇಡೀ ಜಗತ್ತಿಗೆ ತನ್ನ ಪ್ರಾಚೀನ ಸಂಪ್ರದಾಯಗಳ ಬಗ್ಗೆ ಹೆಮ್ಮೆ ಪಡಲು ಮತ್ತು ಅದರ ಸಾಂಸ್ಕೃತಿಕ ಬೇರುಗಳನ್ನು ಅರ್ಥಮಾಡಿಕೊಳ್ಳಲು ಅವಕಾಶವನ್ನು ಒದಗಿಸುತ್ತದೆ ಎಂದು ಸಿಎಂ ಯೋಗಿ ಹೇಳಿದ್ದಾರೆ.