Sunday, March 26, 2023

Latest Posts

ರಾಜ್ಯ ಬಜೆಟ್‌| ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸಿಕ್ಕ ಅನುದಾನವೆಷ್ಟು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಈ ಬಾರಿ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಬಾರೀ ಒತ್ತು ನೀಡಿದ್ದು, ಹಲವೆಡೆ ಅಭಿವೃದ್ದಿ ಕಾರ್ಯಗಳು ಸೇರಿದಂತೆ ಹೊಸ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲು ಯೋಜಿಸಲಾಗಿದೆ.

ಜನರಿಗೆ ದ್ವಿತೀಯ ಹಾಗೂ ತೃತೀಯ ಆರೈಕೆ ಸೇವೆ ಒದಗಿಸಲು 23ನೇ ಸಾಲಿನಲ್ಲಿ ಜಯದೇವ ಸಂಸ್ಥೆಯ ಸಹಯೋಗದೊಂದಿಗೆ 263 ಕೋಟಿ ರೂ. ವೆಚ್ಚ ಮಾಡಿ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ 50 ಹಾಸಿಗೆ, ಹುಬ್ಬಳ್ಳಿಯಲ್ಲಿ 430 ಹಾಸಿಗೆ ಸಾಮರ್ಥ್ಯದ ಹೃದ್ರೋಗ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಕಾರವಾರದಲ್ಲಿ ಪ್ರಗತಿಯಲ್ಲಿರುವ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣವನ್ನು ಪೂರ್ಣಗೊಳಿಸಲಾಗುವುದು. ಬೆಂಗಳೂರಿನ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!