ಹೊಸದಿಗಂತ ವರದಿ ಬೆಳಗಾವಿ:
ರಾಜ್ಯದ ರೈತರ ಸಮಸ್ಯೆಗಳನ್ನು ಪರಿಹರಿಸುವಂತೆ ಕಳೆದ ಕೆಲ ದಿನಗಳಿಂದ ಹೋರಾಟ ಮಾಡಿದ್ದೇವೆ. ಚಳಿಗಾಲದ ಅಧಿವೇಶನದಲ್ಲೂ ಇದೇ ವಿಷಯವಾಗಿ ಚರ್ಚೆ ಮಾಡಲಿದ್ದೇವೆ ಎಂದು ವಿ.ಪ. ಸದಸ್ಯ ಸಿ.ಟಿ. ರವಿ ಹೇಳಿದರು.
ಸುವರ್ಣ ಸೌಧದ ಪಶ್ಚಿಮ ದ್ವಾರದ ಬಳಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೆಕ್ಕೆಜೋಳ ಬೆಳೆದ ರೈತರು ಕಳೆದ ಒಂದುವರೆ ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ. ಆದರೂ ಸರ್ಕಾರ ಕ್ಯಾರೇ ಎನ್ನುತ್ತಿಲ್ಲ. ರೈತರ, ಸಾರ್ವಜನಿಕರ ವಿಷಯದಲ್ಲಿ ಸರ್ಕಾರ ಕಣ್ಣಿದ್ದು ಕುರುಡಾಗಿದೆ. ಇಲ್ಲಿಯವರೆಗೆ ಎಷ್ಟು ಅನುದಾನ ಬಿಡುಗಡೆ ಮಾಡಿದ್ದೀರಿ. ಎಷ್ಟು ಖರ್ಚು ಆಗಿದೆ ಎಂಬುದರ ಬಗ್ಗೆ ಕಾಂಗ್ರೆಸ್ ಸರ್ಕಾರ ಶ್ವೇತ ಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.
ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ವಿಚಾರದ ಬಗ್ಗೆ ಕೆಲವರು ಸಲಹೆ ನೀಡಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಲಿದ್ದೇವೆ ಎಂದರು.

