ಹೊಸದಿಗಂತ ಡಿಜಿಟಲ್ ಡೆಸ್ಕ್:
ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಮೊದಲು ರಾಜ್ಯ ಸರ್ಕಾರ ಅದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಮುಂಬರುವ ಅಧಿವೇಶನಕ್ಕೆ ಬೆಳಗಾವಿಯ ಸುವರ್ಣ ವಿಧಾನ ಸೌಧ ಸಕಾಲಕ್ಕೆ ಸಿದ್ಧವಾಗಲಿದೆ. ಸೌಧದ ವಾರ್ಷಿಕ ನಿರ್ವಹಣೆಗೆ ಕನಿಷ್ಠ 2.5 ಕೋಟಿ ರೂಪಾಯಿ ನಿಧಿಯ ಅಗತ್ಯವಿದ್ದು, ಸರ್ಕಾರ ಇಷ್ಟು ವರ್ಷ ಸಮಯಕ್ಕೆ ಸರಿಯಾಗಿ ಬಿಡುಗಡೆ ಮಾಡಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.
ಸುವರ್ಣ ಸೌಧವನ್ನು ಅಧಿವೇಶನಕ್ಕೆ ಸಜ್ಜುಗೊಳಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಜಾರಿಗೊಳಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಪಿಡಬ್ಲ್ಯುಡಿ ಕಾರ್ಯನಿರ್ವಾಹಕ ಎಂಜಿನಿಯರ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದೇನೆ ಎಂದು ಡಿಸಿ ಹೇಳಿದರು