ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಿನ್ನೆ ಭೀಕರ ರೈಲು ಅಪಘಾತ ಸಂಭವಿಸಿದ್ದು, 240 ಮಂದಿ ಮೃತಪಟ್ಟಿದ್ದಾರೆ.
ಘಟನಾ ಸ್ಥಳದಲ್ಲಿ ಮೂರು ರೈಲುಗಳಿದ್ದರು. ಕೊಲ್ತತ್ತಾದ ಶಾಲಿಮಾರ್ ರೈಲ್ವೇ ನಿಲ್ದಾಣದಿಂದ ಕೋರಮಂಡಲ್ ಎಕ್ಸ್‌ಪ್ರೆಸ್ ಚೆನ್ನೈಗೆ ಹೊರಟಿತ್ತು. ಈ ರೈಲು ಒಡಿಶಾದ ಬಹನಗಾ ಬಜಾರ್ ಸ್ಟೇಷನ್ ಬಳಿ ಹಳಿ ತಪ್ಪಿ ಪಕ್ಕದಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮವಾಗಿ ಕೋರಮಂಡಲ್‌ನ 12 ಬೋಗಿಗಳು ಹಳಿ ತಪ್ಪಿ ಮೂರನೇ ರೈಲು ಮಾರ್ಗದ ಮೇಲೆ ಬಿದ್ದಿವೆ.
ಸ್ವಲ್ಪ ಸಮಯದ ನಂತರ ಇದೇ ಮಾರ್ಗವಾಗಿ ಬಂದ ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಬಿದ್ದಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌ನ ಹಳಿಗಳಿಗೆ ಡಿಕ್ಕಿ ಹೊಡೆದಿದೆ. ಕೋರಮಂಡಲ್ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿಯಾದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆ ಫೋಟೊಗಳಲ್ಲಿ ನೋಡಿ..