ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗ್ಗೆಂದು ಕಣ್ಣು ಬಿಟ್ಟಾಗಿನಿಂದ ರಾತ್ರಿ ಕಣ್ಣು ಮುಚ್ಚುವವರೆಗೂ ಕಣ್ಣೆದುರೇ ಓಡಾಡಿಕೊಂಡು, ಪ್ರೀತಿಯಿಂದ ನೋಡಿಕೊಂಡಿದ್ದ ತಾಯಿಯನ್ನು ಕಳೆದುಕೊಂಡ ಮಕ್ಕಳಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ವಾಸಿಸುತ್ತಿದ್ದ ಪ್ರಭು ಹಾಗೂ ನವ್ಯ ಮೃತರು. ಇತ್ತೀಚೆಗಷ್ಟೇ ತಾಯಿಯನ್ನು ಕಳೆದುಕೊಂಡಿದ್ದ ಅಣ್ಣ, ತಂಗಿ, ಮಾನಸಿಕವಾಗಿ ನೊಂದಿದ್ದರು.ಶಿಡ್ಲಘಟ್ಟ ನಗರದ ಶೆಟ್ಟಪ್ಪನ ತೋಪಿನ ಬಳಿಯ ರೈಲ್ವೇ ಹಳಿಗಳ ಬಳಿ ಮೃತದೇಹ ದೊರೆತಿದೆ.
ಶಿಡ್ಲಘಟ್ಟದ ಪ್ರೇಮ ನಗರದ ನಿವಾಸಿಗಳಾಗಿರುವ ಪ್ರಭು ಮತ್ತು ನವ್ಯ ಆತ್ಮಹತ್ಯೆ ಶರಣಾಗುವ ಮುನ್ನ ಒಬ್ಬರ ಕೈಯನ್ನು ಒಬ್ಬರು ದಾರದಿಂದ ಕಟ್ಟಿಕೊಂಡು ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾರೆ. ಸ್ಥಳೀಯ ರೈಲ್ವೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.