ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಹೃದಯಾಘಾತದ ಸರಣಿ ಸಾವಿನ ಸಂಖ್ಯೆ ಮುಂದುವರಿದಿದೆ. ಬಾಳಿ ಬದುಕಬೇಕಾದವರು ಕೂಡ ಕುಂತಲ್ಲಿ, ನಿಂತಲ್ಲಿ ಪ್ರಾಣ ಕಳೆದುಕೊಳ್ತಿದ್ದಾರೆ.
ಇಂದು ಕೂಡ ಹಾಸನದಲ್ಲಿ ಇಬ್ಬರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಬ್ಬರು, ಯಾದಗಿರಿಯಲ್ಲಿ ಒಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಇವತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹೃದಯಾಘಾತಕ್ಕೆ ಬಲಿಯಾದವರ ಮರಣೋತ್ತರ ಪರೀಕ್ಷೆ ಕಡ್ಡಾಯಕ್ಕೆ ಸೂಚನೆ ಕೊಟ್ಟಿದ್ದಾರೆ. ಪ್ರತಿಯೊಂದು ಕೇಸ್‌ಗೂ ಹಿಸ್ಟರಿ ಬರೆಯಬೇಕು ಅಂತ ಸೂಚನೆ ಕೊಟ್ಟಿದ್ದಾರೆ.